ಉದಯವಾಹಿನಿ, ನಟ ಝೈದ್ ಖಾನ್ ಅವರು ತಮ್ಮ ಮೊದಲ ಚಿತ್ರ ಬನಾರಸ್ ಮೂಲಕವೇ ಎಲ್ಲರ ಗಮನ ಸೆಳಿದಿದ್ದರು. ಪ್ರಸ್ತುತ ಅವರು ನಾಯಕರಾಗಿ ನಟಿಸುತ್ತಿರುವ ಎರಡನೇ ಚಿತ್ರ ಕಲ್ಟ್. ಉಪಾಧ್ಯಕ್ಷ ಸೇರಿದಂತೆ ಯಶಸ್ವಿ ಚಿತ್ರಗಳ ನಿರ್ದೇಶಕ ಅನಿಲ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ರಚಿತರಾಮ್ ಹಾಗೂ ಮಲೈಕಾ ಈ ಚಿತ್ರದ ನಾಯಕಿಯರಾಗಿ ನಟಿಸುತ್ತಿದ್ದಾರೆ. ಬಹು ನಿರೀಕ್ಷಿತ ಈ ಚಿತ್ರದ ಮೊದಲ ಹಾಡು ಅಯ್ಯೋ ಶಿವನೇ ಇತ್ತೀಚೆಗೆ ಬಿಡುಗಡೆ ಆಗಿದೆ.
ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡನ್ನು ಜಸ್ಕರಣ್ ಸಿಂಗ್ ಹಾಗೂ ಪೃಥ್ವಿ ಭಟ್ ಹಾಡಿದ್ದಾರೆ. ಝೈದ್ ಖಾನ್ ಹಾಗೂ ಮಲೈಕ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ನಿರ್ದೇಶಕ ಅನಿಲ್ ಕುಮಾರ್ ಅವರೆ ಬರೆದಿರುವ ಕಲ್ಟ್ ಚಿತ್ರದ ಮೊದಲ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ. ಅಯ್ಯೋ ಶಿವನೇ ಹಾಡಿಗೆ ಸಿಗುತ್ತಿರುವ ಪ್ರಶಂಸೆಗೆ ಆನಂದ್ ಆಡಿಯೋ ಸಂಸ್ಥೆ ಸಹ ಸಂತೋಷ ವ್ಯಕ್ತಪಡಿಸಿದೆ.

.ವಿ.ಎನ್ ಪ್ರೊಡಕ್ಷನ್ಸ್ ಅರ್ಪಿಸುವ, ಲೋಕಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಬಹು ನಿರೀಕ್ಷಿತ `ಕಲ್ಟ್’ (Cult movie) ಚಿತ್ರದ ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Leave a Reply

Your email address will not be published. Required fields are marked *

error: Content is protected !!