ಉದಯವಾಹಿನಿ, ಉತ್ತರ ಪ್ರದೇಶದ ಬರೇಲಿಯಲ್ಲಿರುವ ಬಾಲಿವುಡ್ ನಟಿ ದಿಶಾ ಪಟಾನಿ ಅವರ ಮನೆ ಹೊರಗೆ ಶುಕ್ರವಾರ ತಡರಾತ್ರಿ ಗುಂಡಿನ ದಾಳಿ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಬೆಳಗ್ಗಿನ ಜಾವ 3:30ರ ಸುಮಾರಿಗೆ, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದಿಶಾ ಪಟಾನಿ ಅವರ ಮನೆಯ ಮೇಲೆ ಮೂರರಿಂದ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಗೋಲ್ಡಿ ಬ್ರಾರ್ ಗ್ಯಾಂಗ್ ಗುಂಡಿನ ದಾಳಿ ಹೊಣೆಯನ್ನ ಹೊತ್ತುಕೊಂಡಿದೆ. ಸದ್ಯ ಘಟನೆಯಲ್ಲಿ ಯಾರೊಬ್ಬರೂ ಗಾಯಗೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯು ಪ್ರದೇಶದಲ್ಲಿ ಕೋಲಾಹಲ ಸೃಷ್ಟಿಸಿದ್ದು ಮಾಹಿತಿ ಪಡೆದ ನಂತರ, ದಿಶಾ ಪಟಾನಿ ಅವರ ಮನೆ ಮುಂದೆ ಭಾರೀ ಪೊಲೀಸ್ ಪಡೆ ನಿಯೋಜಿಸಲಾಗಿದೆ.
ದಾಳಿ ಹೊಣೆ ಹೊತ್ತುಕೊಂಡಿರುವ ಗೋಲ್ಡಿ ಬ್ರಾರ್ ಗ್ಯಾಂಗ್ ಸೋಷಿಯಲ್ ಮೀಡಿಯಾ ಪೋಸ್ಟ್‌ವೊಂದನ್ನು ಹಂಚಿಕೊಂಡಿದೆ. ಹಿಂದಿಯಲ್ಲಿ ಬರೆಯಲಾದ ಪೋಸ್ಟ್‌ನಲ್ಲಿ ಇಬ್ಬರು ಪುರುಷರ ಹೆಸರನ್ನು ಉಲ್ಲೇಖಿಸಲಾಗಿದೆ. ಜೊತೆಗೆ ಇದು ಚಿತ್ರೋದ್ಯಮಕ್ಕೆ ನೀಡಲಾದ ಎಚ್ಚರಿಕೆ ಎಂದೂ ಕೂಡ ಬರೆದುಕೊಂಡಿದೆ.
