ಉದಯವಾಹಿನಿ, ಶಿವಮೊಗ್ಗ: ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಹೊಸನಗರದ ಹೊಸೂರು (ಸಂಪೆಕಟ್ಟೆ) ಗ್ರಾಪಂ ವ್ಯಾಪ್ತಿಯ ಬಂಟೋಡಿ ಎಂಬಲ್ಲಿ ನಡೆದಿದೆ. ಮೃತನನ್ನು ಪೂರ್ಣೇಶ್ (22) ಎಂದು ಗುರುತಿಸಲಾಗಿದೆ. ಅದೃಷ್ಟವಶಾತ್ ಜೊತೆಯಲ್ಲಿದ್ದ ಶರತ್ ಮತ್ತು ರಂಜನ್ ಎಂಬ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ‌.
ಮುಳುಗು ತಜ್ಞ ಈ‍ಶ್ವರ್‌ ಮಲ್ಪೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಪೂರ್ಣೇಶ್ ಮೃತದೇಹವನ್ನು ಪತ್ತೆ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಮುಳುಗು ತಜ್ಞ ಈಶ್ವರ್ ಮಲ್ಪೆ, 40 ಅಡಿ ಆಳದ ನೀರಿನಲ್ಲಿ ಈ ಯುವಕನ ಮೃತದೇಹ ದೊರೆತಿದೆ. ದೋಣಿ ತೆಪ್ಪದಲ್ಲಿ ಸಾಗುವಾಗ ಲೈಫ್ ಜಾಕೆಟ್ ಇಟ್ಟುಕೊಳ್ಳುವಂತೆ ಅವರು ಸ್ಥಳೀಯರಲ್ಲಿ ಮನವಿಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಥಳೀಯರು, ಕಾಲು ಸಂಕ ನಿರ್ಮಾಣ ಮಾಡುವಂತೆ 20 ವರ್ಷಗಳಿಂದ ಮನವಿ ಮಾಡುತ್ತಿದ್ದೇವೆ. ಇಷ್ಟಾದರೂ ಜನಪ್ರತಿನಿಧಿಗಳು ಸ್ಪಂದಿಸಿಲ್ಲ ಎಂದು ಕಿಡಿಕಾರಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!