ಉದಯವಾಹಿನಿ, ಹಾಸನ: ಮೊಸಳೆಹೊಸಳ್ಳಿಯಲ್ಲಿ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ ದುರಂತ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಈ ಮೂಲಕ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇತ್ತ ಟ್ರಕ್ ಡೈವರ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದ್ದು, ಆತನ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದ ಹೆಚ್.ಡಿ ದೇವೇಗೌಡ ಅವರು ಇಂದು ಮೃತರ ಕುಟುಂಬಕ್ಕೆ ತೆರಳಿ ಸಾಂತ್ವನ ಹೇಳಿದ್ದಾರೆ. ಜೊತೆಗೆ ಜೆಡಿಎಸ್ ಪಕ್ಷದಿಂದ ಪರಿಹಾರ ಮೊತ್ತವನ್ನೂ ಘೋಷಣೆ ಮಾಡಿದ್ದಾರೆ. ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. ಜೊತೆಗೆ ರಾಜ್ಯ ಸರ್ಕಾರ ಪರಿಹಾರದ ಮೊತ್ತ ಹೆಚ್ಚಿಸುವಂತೆ ಸರ್ಕಾರಕ್ಕೆ ಆಗ್ರಹ ಕೂಡ ಮಾಡಿದ್ದಾರೆ.
ಹಾಸನಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ದೇವೇಗೌಡರು. ವ್ಹೀಲ್‌ಚೇರಲ್ಲೇ ತೆರಳಿ ಹಿಮ್ಸ್‌ಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾತನಾಡಿದ ಹೆಚ್.ಡಿ ದೇವೇಗೌಡರು, ಜೆಡಿಎಸ್ ಪಕ್ಷದ ವತಿಯಿಂದ ಮೃತ ಕುಟುಂಬಸ್ಥರಿಗೆ 1 ಲಕ್ಷ ಪರಿಹಾರ ಘೋಷಣೆ ಮಾಡಿದರು. ಪೊಲೀಸರು ಮುಂಜಾಗ್ರತೆ ವಹಿಸಿದ್ದರೇ ಈ ಅನಾಹುತ ತಡೆಯಬಹುದಿತ್ತು ಎಂದರಲ್ಲದೇ ರಾಜ್ಯ ಸರ್ಕಾರ ಪರಿಹಾರದ ಮೊತ್ತ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
