ಉದಯವಾಹಿನಿ, ಭಾರತದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪದ್ಮಶ್ರೀ, ಪದ್ಮ ವಿಭೂಷಣ, ಶೌರ್ಯ ಪ್ರಶಸ್ತಿ, ಭಾರತ ರತ್ನದಂತಹ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ ಅಂತ ನಮಗೆಲ್ಲರಿಗೂ ಗೊತ್ತೇ ಇದೆ. ಹಾಗೆಯೇ ಫಿಲಿಫೈನ್ಸ್ ದೇಶ ನೀಡುವ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯ ಬಗ್ಗೆ ನಿಮ್ಗೆ ಗೊತ್ತಾ? ಈ ಪಶಸ್ತಿಯು ನೊಬೆಲ್ ಪ್ರಶಸ್ತಿಗೆ ಸಮಾನಾದ ಪ್ರಶಸ್ತಿ ಅಂತಾನೇ ಹೇಳಲಾಗುತ್ತದೆ.
ಹೌದು, ಈ ಪ್ರಶಸ್ತಿಯನ್ನು ನೊಬೆಲ್ ಪ್ರಶಸ್ತಿಗೆ ಸಮಾನವಾದ ಪ್ರಶಸ್ತಿ ಎನ್ನುತ್ತಾರೆ. ಮೊದಲ ಬಾರಿಗೆ ಭಾರತದ ಸಂಸ್ಥೆಯೊಂದು ಈ ಪ್ರಶಸ್ತಿಯನ್ನು ತನ್ನ ಮುಡುಗೇರಿಸಿಕೊಂಡಿದೆ. ಭಾರತದ ಸಂಸ್ಥೆಯು ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಆಯ್ಕೆಯಾಗಿದೆ. ಇದರೊಂದಿಗೆ ಪ್ರತಿಷ್ಠಿತ ಗೌರವ ಪಡೆದ ಭಾರತದ ಮೊದಲ ಸಂಸ್ಥೆ ಎಂಬ ಗೌರವಕ್ಕೆ ಪಾತ್ರವಾಗಿದೆ.
ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯು ಏಷ್ಯಾದ ಜನರಿಗೆ ಅಸಾಧಾರಣ ಧೈರ್ಯ ಮತ್ತು ನಿಸ್ವಾರ್ಥ ಸೇವೆ ಸಲ್ಲಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಗುರುತಿಸಿ ಗೌರವಿಸುತ್ತದೆ. ಶಾಲೆಯಿಂದ ಹೊರಗುಳಿದಿರುವ ಹಳ್ಳಿಗಾಡಿನ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ‘Educate Girls’ ಸಂಸ್ಥೆಗೆ ಈ ಗೌರವ ದೊರೆತಿದೆ. ರಾಜಸ್ಥಾನದ ಕುಗ್ರಾಮವೊಂದರಲ್ಲಿ ಬಾಲಕಿಯೊಬ್ಬಳ ಶಿಕ್ಷಣಕ್ಕಾಗಿ ಆರಂಭಗೊಂಡಿದ್ದ Educate Girls ಎಂಬ ಸಂಸ್ಥೆಯು, ಕಾಲ ಕಳೆದಂತೆ ಹೆಮ್ಮರವಾಗಿ ಬೆಳೆದು, ಸಾವಿರಾರು ಶಿಕ್ಷಣ ವಂಚಿತ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿ, ಅವರೆಲ್ಲರೂ ಸ್ವಾವಲಂಬಿಗಳಾಗಿ ಬದುಕಲು ಸಂಸ್ಥೆ ಶ್ರಮಿಸುತ್ತಿದೆ.
