ಉದಯವಾಹಿನಿ, ವಾಷಿಂಗ್ಟನ್‌: ರಷ್ಯಾದ ಆರ್ಥಿಕ ಪ್ರಾಬಲ್ಯವನ್ನು ದುರ್ಬಲಗೊಳಿಸಲು ಚೀನಾದ ಮೇಲೆ 50ರಿಂದ 100% ರಷ್ಟು ಸುಂಕಗಳನ್ನು ವಿಧಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನ್ಯಾಟೋಗೆ ಕರೆ ನೀಡಿದ್ದಾರೆ. ಟ್ರಂಪ್ ನ್ಯಾಟೋ ರಾಷ್ಟ್ರಗಳಿಗೆ ಪತ್ರವೊಂದನ್ನು ಬರೆದಿದ್ದು, ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವಂತೆ ಮತ್ತು ರಷ್ಯಾದ ಮೇಲೆ ಪ್ರಮುಖ ನಿರ್ಬಂಧಗಳನ್ನು ವಿಧಿಸುವಂತೆ ಮನವಿ ಮಾಡಿದ್ದಾರೆ.ಎಲ್ಲಾ ನ್ಯಾಟೋ ರಾಷ್ಟ್ರಗಳು ಒಪ್ಪಿಕೊಂಡು ಅದೇ ರೀತಿ ಮಾಡಲು ಪ್ರಾರಂಭಿಸಿದಾಗ ಮತ್ತು ಎಲ್ಲಾ ನ್ಯಾಟೋ ರಾಷ್ಟ್ರಗಳು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಿದಾಗ, ನಾನು ರಷ್ಯಾದ ಮೇಲೆ ಪ್ರಮುಖ ನಿರ್ಬಂಧಗಳನ್ನು ವಿಧಿಸಲು ಸಿದ್ಧನಿದ್ದೇನೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ರಷ್ಯಾ ಮತ್ತು ಉಕ್ರೇನ್ ಜೊತೆಗಿನ ಯುದ್ಧ ಮುಗಿದ ನಂತರ ಚೀನಾದ ಮೇಲಿನ 50 ರಿಂದ 100% ಸುಂಕಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬಹುದು. ಆದರೆ, ಈಗ ವಿಧಿಸಬಹುದಾದ ಸುಂಕವು ಯುದ್ಧವನ್ನು ಕೊನೆಗೊಳಿಸುವಲ್ಲಿ ಹೆಚ್ಚಿನ ಸಹಾಯ ಮಾಡುತ್ತದೆ ಎಂದು ಟ್ರಂಪ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!