ಉದಯವಾಹಿನಿ,ನವದೆಹಲಿ: ಭಾರತ ಮತ್ತು ಪಾಕ್ ನಡುವೆ ಇಂದು ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಕ್ಕೆ ಅವಕಾಶ ನೀಡಿದ್ದಕ್ಕೆ AIMIM ಅಧ್ಯಕ್ಷ ಅಸಾದುದ್ದೀನ್ ಓವೈಸಿ (ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸರ್ಕಾರ ಭಾರತಕ್ಕೆ ಪಾಕಿಸ್ತಾನದೊಂದಿಗೆ ಏಷ್ಯಾ ಕಪ್ ಕ್ರಿಕೆಟ್ ಪಂದ್ಯ ಆಡಲು ಅವಕಾಶ ನೀಡಿದೆ. 26 ಜನರ ಜೀವಗಳಿಗಿಂತ ಆರ್ಥಿಕ ಲಾಭವೇ ಮುಖ್ಯವೇ? ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಉಗ್ರರು ಪಹಲ್ಗಾಮ್‌ನಲ್ಲಿ ನಮ್ಮ 26 ನಾಗರಿಕರರನ್ನು ಗುಂಡು ಹಾರಿಸಿ ಕೊಂದಿದ್ದರು. ಇದಕ್ಕಾಗಿ ಪಾಕಿಸ್ತಾನದ ವಿರುದ್ಧ ಕ್ರಿಕೆಟ್ ಪಂದ್ಯ ಆಡಲು ನಿರಾಕರಿಸುವ ಅಧಿಕಾರ ನಿಮಗೆ ಇಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.
ಇಂದು ನಿಗದಿಯಾಗಿರುವ ಕ್ರಿಕೆಟ್ ಪಂದ್ಯವನ್ನು ಬಹಿಷ್ಕರಿಸುವಂತೆ ಅನೇಕ ವಿರೋಧ ಪಕ್ಷದ ನಾಯಕರು ಕರೆ ನೀಡಿದ್ದಾರೆ. ಕಾಂಗ್ರೆಸ್ ನಾಯಕ ಅಭಿಷೇಕ್ ದತ್ ಭಾರತ ಆಟದಲ್ಲಿ ಭಾಗವಹಿಸುವುದನ್ನು ಟೀಕಿಸಿದ್ದಾರೆ. ಪಂದ್ಯವನ್ನು ರದ್ದುಗೊಳಿಸಬೇಕು. ಈ ಪಂದ್ಯದಲ್ಲಿ ಆಡುವ ನಿರ್ಧಾರವು ʻಭಯೋತ್ಪಾದನೆಯೊಂದಿಗೆ ಮಾತುಕತೆ ಇಲ್ಲʼ ಎಂಬ ಸರ್ಕಾರದ ನಿಲುವಿಗೆ ವಿರುದ್ಧವಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
