ಉದಯವಾಹಿನಿ, ಸೋಶಿಯಲ್ ಮೀಡಿಯಾವೇ ಹಾಗೆ, ಜನಸಾಮಾನ್ಯರನ್ನು ರಾತ್ರಿ ಬೆಳಗಾಗುವಷ್ಟರಲ್ಲಿ ಫೇಮಸ್ ಮಾಡಿಬಿಡುತ್ತದೆ. ಕೆಲವರು ರೀಲ್ಸ್ ಸೇರಿದಂತೆ ನಾನಾ ರೀತಿಯ ವೀಡಿಯೋ ಮಾಡಿ ಫೇಮಸ್ ಆಗಲು ನೋಡುತ್ತಾರೆ. ಇನ್ನು ಕೆಲವರು ಒಂದೇ ಒಂದು ವೀಡಿಯೋದಿಂದನೇ ಹವಾ ಸೃಷ್ಟಿಸಿ ಬಿಡುತ್ತಾರೆ. ಇದಕ್ಕೆ ಈ ಹುಡುಗಿಯೇ ಸಾಕ್ಷಿ. ಹೌದು, ಕನ್ನಡ ಸಿನಿಮಾದ ಹಾಡೊಂದನ್ನು ತನ್ನದೇ ಧಾಟಿಯಲ್ಲಿ ಹಾಡಿ ಹುಡುಗಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದಾಳೆ. ಈ ವೀಡಿಯೋಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿವೆ.
ಕಳೆದ ಮೂರ್ನಾಲ್ಕು ದಿನಗಳಿಂದ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲರ ಬಾಯಲ್ಲಿ ‘ಹೂವಿನ ಬಾಣದಂತೆ’ ಹಾಡು ಕೇಳಿಬರುತ್ತಿದೆ. ‘ಬಿರುಗಾಳಿ’ ಚಿತ್ರದ ಈ ಹಾಡು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಹಾಡು ಇಷ್ಟೊಂದು ಫೇಮಸ್ ಆಗಲು ಕಾರಣ ನಿತ್ಯಾಶ್ರೀ ಎಂಬ ಹುಡುಗಿ. ಸ್ನೇಹಿತರ ಗುಂಪಿನಲ್ಲಿ ತಮಾಷೆಗೆಂದು ಹಾಡಿದ ‘ಹೂವಿನ ಬಾಣದಂತೆ’ ಹಾಡು ಸದ್ಯ ಎಲ್ಲೆಡೆ ವೈರಲ್ ಆಗಿದೆ. ಇನ್ಸ್ಟಾದಲ್ಲಿ ಮೊದಲು 150 ಮಂದಿ ಫಾಲೋವರ್ಸ್ ಅನ್ನು ಹೊಂದಿದ್ದ ನಿತ್ಯಾಶ್ರೀ ಈ ಹಾಡು ವೈರಲ್ ಆದ ಬಳಿಕ 40 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಅನ್ನು ಹೊಂದಿದ್ದಾಳೆ.

Leave a Reply

Your email address will not be published. Required fields are marked *

error: Content is protected !!