ಉದಯವಾಹಿನಿ,ರಾಮನಗರ: ಬುಧವಾರ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೈವೆಯಲ್ಲಿ ಬುಧವಾರ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಪ್ಲೈವುಡ್ ತುಂಬಿದ್ದ ಬೊಲೆರೋ ವಾಹನಕ್ಕೆ ಕೆಎಸ್‌ಆರ್ ಟಿಸಿ ಎಲೆಕ್ಟ್ರಿಕ್ ಬಸ್ ಢಿಕ್ಕಿಯಾದ ಪರಿಣಾಮ ಬಸ್ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರ ತಾಲೂಕಿನ ವಿಜಯಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಬಸ್ ನಲ್ಲಿದ್ದಪ್ರಯಾಣಿಕರೂ ಸಣ್ಣಪುಟ್ಟ ಗಾಯಗಾಳಿಗೊಳಗಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಎಸ್‌ಆರ್ ಟಿಸಿ ಎಲೆಕ್ಟ್ರಿಕ್ ಬಸ್ ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು, ಈ ವೇಳೆ ಫ್ಲೈವುಡ್ ತುಂಬಿದ್ದ ಬೊಲೆರೋ ವಾಹನ ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ವರದಿಯಾಗಿದೆ.
