ಉದಯವಾಹಿನಿ, ಧ್ರುವ ಸರ್ಜಾ ಹಾಗೂ ಪ್ರೇಮ್ ಕಾಂಬಿನೇಷನ್‌ನಲ್ಲಿ ಭರ್ಜರಿಯಾಗಿ ಶೂಟಿಂಗ್ ಮಾಡುತ್ತಿರುವ ಸಿನಿಮಾ ಕೆಡಿ. ಈ ಸಿನಿಮಾದ ಮುಖ್ಯ ಪಾತ್ರವೊಂದರಲ್ಲಿ ಕಿಚ್ಚ ಸುದೀಪ್ ನಟಿಸುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ಈ ಬಗ್ಗೆ ಕಿಚ್ಚ ಸುದೀಪ್ ಅವರನ್ನ ಕೇಳಿದಾಗ್ಲೂ ಸಣ್ಣ ಸ್ಮೈಲ್ ಕೊಟ್ಟು ವಿಷ್ಯ ಬದಲಾಯಿಸಿದ್ದರು. ಆ ಎಲ್ಲಾ ಪ್ರಶ್ನೆಗಳಿಗೂ, ಅಂತೆ ಕಂತೆಗೂ ಈಗ ಉತ್ತರ ಸಿಕ್ಕಿದೆ.
ಕೆಡಿ ಸಿನಿಮಾದ (KD Cinema) ಅತಿಥಿ ಪಾತ್ರದಲ್ಲಿ ಕಿಚ್ಚ ಸುದೀಪ್ ನಟಿಸಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಶೂಟಿಂಗ್‌ನಲ್ಲಿ ಕಿಚ್ಚ ಸುದೀಪ್ ಭಾಗಿಯಾಗಿದ್ದಾರೆ. ಸೆಟ್‌ನಲ್ಲಿ ಧ್ರುವ ಸರ್ಜಾ ಜೊತೆಗಿನ ಫೋಟೋಗಳು ಈಗ ವೈರಲ್ ಆಗಿವೆ. ಸಿನಿಮಾದಲ್ಲಿ ಸುದೀಪ್ ಪಾತ್ರವೇನು..? ಯಾವ ರೀತಿಯಾದ ಪಾತ್ರ ಎನ್ನುವ ಬಗ್ಗೆ ಚಿತ್ರತಂಡ ಸದ್ಯದಲ್ಲಿಯೇ ಮಾಹಿತಿ ಹಂಚಿಕೊಳ್ಳಲಿದೆ. ಸದ್ಯ ಕಿಚ್ಚ ಸುದೀಪ್ ಕೆಡಿ ಸಿನಿಮಾದಲ್ಲಿ ನಟಿಸಿರುವ ಪಾತ್ರದ ಬಗ್ಗೆ ಕೌತುಕತೆ ಮೂಡಿಸಿದೆ.
