ಉದಯವಾಹಿನಿ, ಲಕ್ನೋ: ಐಷಾರಾಮಿ ಸ್ಲೀಪರ್ ಬಸ್ಸೊಂದು ಟ್ರಕ್‌ಗೆ ಡಿಕ್ಕಿಯಾದ ಪರಿಣಾಮ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದು, 9 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ವಾರಣಾಸಿ ಬಳಿಯ ಜಾನ್‌ಪುರದಲ್ಲಿ ನಡೆದಿದೆ.
ಪ್ರಯಾಣಿಕರನ್ನು ಛತ್ತೀಸ್‌ಗಢದಿಂದ ಅಯೋಧ್ಯೆ ಮತ್ತು ವಾರಣಾಸಿಯ ಧಾರ್ಮಿಕ ಸ್ಥಳಗಳಿಗೆ ಕರೆದೊಯ್ಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 50 ಪ್ರಯಾಣಿಕರಿದ್ದ ಬಸ್ ಜಾನ್‌ಪುರದ ಬಳಿ ಓವರ್ ಟೇಕ್ ಮಾಡುವ ಭರದಲ್ಲಿ ಟ್ರಕ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಬಸ್‌ನ ಒಂದು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಒಂಭತ್ತು ಮಂದಿ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
