ಉದಯವಾಹಿನಿ, ಗುಜರಾತ್‌ನ ಜಾಮ್‌ನಗರದಲ್ಲಿ ಇರುವ ವನ್ಯಪ್ರಾಣಿ ರಕ್ಷಣೆ ಮತ್ತು ಪುನರ್ವಸತಿ ಕೇಂದ್ರವಾದ ವಂತಾರದ ಕಾರ್ಯವೈಖರಿ ಬಗ್ಗೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಕ್ಲೀನ್ ಚಿಟ್ ನೀಡಿದೆ. ಅಂದಹಾಗೆ ಸುಪ್ರೀಂ ಕೋರ್ಟ್ ನಿಂದ ಎಸ್ಐಟಿ ನೇಮಕ ಮಾಡಲಾಗಿತ್ತು. ನ್ಯಾಯಮೂರ್ತಿಗಳಾದ ಪಂಕಜ್ ಮಿಥಲ್ ಮತ್ತು ಪಿ ಬಿ ವರಾಳೆ ಅವರ ಪೀಠವು ವರದಿಯನ್ನು ದಾಖಲೆಯಾಗಿ ಸ್ವೀಕರಿಸಿ, ವಂತಾರದಲ್ಲಿನ ನಿಯಮದ ಅನುಸರಣೆ ಮತ್ತು ನಿಯಂತ್ರಕ ಕ್ರಮಗಳ ವಿಷಯದ ಬಗ್ಗೆ ಅಧಿಕಾರಿಗಳು ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂಬ ವಿಷಯವನ್ನು ಗಮನಕ್ಕೆ ತೆಗೆದುಕೊಂಡಿದೆ.
ಕಳೆದ ಶುಕ್ರವಾರ ಸುಪ್ರೀಂಕೋರ್ಟ್ ನೇಮಿಸಿದ್ದ ಎಸ್‌ಐಟಿ ತನ್ನ ವರದಿಯನ್ನು ಸಲ್ಲಿಸಿತ್ತು. ಸೋಮವಾರ ಸುಪ್ರೀಂಕೋರ್ಟ್ ಆ ವರದಿಯನ್ನು ಪರಿಶೀಲಿಸಿತು. ಈ ಬಗ್ಗೆ ವಿವರವಾದ ಆದೇಶ ನೀಡುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.
ವಂತಾರ ಕಾನೂನುಗಳನ್ನು ಪಾಲನೆ ಮಾಡುತ್ತಿಲ್ಲ ಮತ್ತು ಭಾರತ ಹಾಗೂ ವಿದೇಶಗಳಿಂದ ಪ್ರಾಣಿಗಳನ್ನು, ಅದರಲ್ಲೂ ವಿಶೇಷವಾಗಿ ಆನೆಗಳನ್ನು ಸುಪರ್ದಿಗೆ ತೆಗೆದುಕೊಳ್ಳಲಾಗುತ್ತಿದೆ ಎಂದು ಆರೋಪ ಮಾಡಲಾಗಿತ್ತು. ಈ ಆರೋಪಗಳ ಹಿನ್ನೆಲೆಯಲ್ಲಿ ವಂತಾರ ವಿರುದ್ಧ ಸತ್ಯಶೋಧನಾ ವಿಚಾರಣೆ ನಡೆಸಲು ಆಗಸ್ಟ್ 25ನೇ ತಾರೀಕಿನಂದು ಸುಪ್ರೀಂಕೋರ್ಟ್ ಎಸ್‌ಐಟಿಯನ್ನು ರಚಿಸಿತು.
ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿನ ವರದಿಗಳು ಮತ್ತು ಎನ್‌ಜಿಒಗಳು ಹಾಗೂ ವನ್ಯಜೀವಿ ಸಂಸ್ಥೆಗಳಿಂದ ಬಂದ ವಿವಿಧ ದೂರುಗಳ ಆಧಾರದ ಮೇಲೆ ವಂತಾರ ವಿರುದ್ಧ ಅಕ್ರಮಗಳನ್ನು ಆರೋಪಿಸಿ, ಎರಡು ಪಿಐಎಲ್‌ಗಳ ವಿಚಾರಣೆ ನಡೆಸುವಾಗ ಸುಪ್ರೀಂ ಕೋರ್ಟ್ ನಿಂದ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನಾಲ್ವರು ಸದಸ್ಯರ ಎಸ್‌ಐಟಿಯನ್ನು ರಚಿಸಿತು.

 

Leave a Reply

Your email address will not be published. Required fields are marked *

error: Content is protected !!