ಉದಯವಾಹಿನಿ, ನವದೆಹಲಿ: ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರಾದ ಯುವರಾಜ್‌ ಸಿಂಗ್‌, ರಾಬಿನ್ ಉತ್ತಪ್ಪ ಹಾಗೂ ನಟ ಸೋನು ಸೂದ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಇದು 1xBet ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ. ಈ ಹಿನ್ನೆಲೆ ಮೂವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಅದರಂತೆ ಸೆ.22ಕ್ಕೆ ರಾಬಿನ್ ಉತ್ತಪ್ಪ ಸೆ.23ಕ್ಕೆ ಯುವರಾಜ್ ಸಿಂಗ್ ಹಾಗೂ ಸೆ.24ಕ್ಕೆ ನಟ ಸೋನು ಸೂದ್‌ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ವೇಳೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿಯಲ್ಲಿ ಮೂವರ ಹೇಳಿಕೆ ದಾಖಲಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇತ್ತೀಚಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಶಿಖರ್ ಧವನ್ ಇಡಿ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಸತತ 8 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು ಎಂದು ತಿಳಿದುಬಂದಿದೆ.

ಏನಿದು ಕೇಸ್…?: ಹೂಡಿಕೆದಾರರಿಗೆ ಕೋಟ್ಯಂತರ ರೂ. ವಂಚನೆ ಜೊತೆಗೆ ಭಾರೀ ಪ್ರಮಾಣದ ತೆರಿಗೆ ವಂಚನೆ ಮಾಡಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಬೆಟ್ಟಿಂಗ್ ಆ್ಯಪ್‌ಗಳಿಗೆ ಸಂಬಂಧಿಸಿದ ಹಲವಾರು ಪ್ರಕರಣಗಳ ತನಿಖೆ ನಡೆಸುತ್ತಿದೆ. ಈಗಾಗಲೇ ಬೆಟ್ಟಿಂಗ್ ಆ್ಯಪ್‌ಗಳ ಪ್ರಚಾರದಲ್ಲಿದ್ದ ಹಲವಾರು ಬಾಲಿವುಡ್ ಮತ್ತು ದಕ್ಷಿಣ ಭಾರತದ ಚಲನಚಿತ್ರ ತಾರೆಯರು, ಕ್ರಿಕೆಟಿಗರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ. ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ಹರ್ಭಜನ್ ಸಿಂಗ್, ಊರ್ವಶಿ ರೌಟೇಲಾ ಮತ್ತು ಸುರೇಶ್ ರೈನಾ ಕೂಡಾ ಈ ಪಟ್ಟಿಯಲ್ಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!