ಉದಯವಾಹಿನಿ, ಬೆಂಗಳೂರು: ನಟ ವಿಷ್ಣುವರ್ಧನ್ ಹುಟ್ಟುಹಬ್ಬದಂದು ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆಗೆ ಅವಕಾಶ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಸಂಭ್ರಮಾಚರಣೆಗೆ ಅವಕಾಶ ನೀಡುವಂತೆ ವಿಷ್ಣುವರ್ಧನ್ ಅಭಿಮಾನಿಗಳ ಸಂಘ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಸಮಾಧಿ ಜಾಗ ವಿವಾದ ವಿಚಾರಣೆ ಬಾಕಿ ಇರುವ ಹಿನ್ನೆಲೆ ಸಂಭ್ರಮಾಚರಣೆಗೆ ಅವಕಾಶ ನೀಡಲು ನಿರಾಕರಿಸಿದೆ.
ಇನ್ನೂ ಇತ್ತೀಚೆಗೆ ಹೈಕೋರ್ಟ್ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿತ್ತು. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ಸರ್ಕಾರ, ಪೊಲೀಸ್ ಇಲಾಖೆ ಹಾಗೂ ವಾಣಿಜ್ಯ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಡಾ.ವಿಷ್ಣುವರ್ಧನ್ ಅವರಿಗೆ ಇತ್ತೀಚೆಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿತ್ತು. ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು.
