ಉದಯವಾಹಿನಿ, ಬೆಂಗಳೂರು: ನಾಳೆ ಮತ್ತು ನಾಡಿದ್ದು ಬಿಜೆಪಿ ಅಭ್ಯಾಸವರ್ಗ ನಡೆಯಲಿದೆ ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ತಿಳಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಭ್ಯಾಸವರ್ಗದ ಉದ್ಘಾಟನೆಗೆ ಕೇಂದ್ರ ಮಾನವಸಂಪನ್ಮೂಲ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇರಲಿದ್ದಾರೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್, ರಾಜ್ಯದ ಪ್ರಭಾರಿ ಡಾ.ರಾಧಾಮೋಹನ್ ಅಗರವಾಲ್ ಅವರೂ ಆಗಮಿಸುತ್ತಾರೆ ಎಂದು ವಿವರಿಸಿದರು.
ಧಾನಮಂತ್ರಿ ನರೇಂದ್ರ ಮೋದಿಜೀ ಅವರಿಗೆ 75 ವರ್ಷ ತುಂಬಿದೆ. 2047ರ ವೇಳೆಗೆ ದೇಶವನ್ನು ವಿಕಸಿತ ಭಾರತವಾಗಿ ಮಾಡಲು, ಭಾರತವನ್ನು ನಂ.1 ದೇಶವಾಗಿ ಮಾಡಲು ಅತ್ಯಂತ ಉತ್ಸಾಹ, ಉಲ್ಲಾಸದಿಂದ ಕೆಲಸ ಮಾಡಿ ಅಭಿವೃದ್ಧಿ ಪಥದೆಡೆಗೆ ಒಯ್ಯುತ್ತಿದ್ದಾರೆ. ಅವರ ಹುಟ್ಟುಹಬ್ಬದ ನಿಮಿತ್ತವಾಗಿ ದೇಶಾದ್ಯಂತ ಸೇವಾ ಚಟುವಟಿಕೆಗಳನ್ನು ನಾವು ಮಾಡುತ್ತಿದ್ದೇವೆ ಎಂದರು.
ಇವತ್ತು ರಾಜ್ಯಾದ್ಯಂತ ರಕ್ತದಾನ ಶಿಬಿರಗಳು, ಉಚಿತ ಆರೋಗ್ಯ ತಪಾಸಣಾ ಶಿಬಿರಗಳು, ಸ್ವಚ್ಛತಾ ಕಾರ್ಯಕ್ರಮಗಳು, ವಸ್ತು ಪ್ರದರ್ಶನ, ನೂರಾರು-ಸಾವಿರಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ವಿವರಿಸಿದರು. ಮೋದಿಜೀ ಅವರು 25 ವರ್ಷದ ತರುಣರಂತೆ ಕೆಲಸ ಮಾಡುತ್ತಿದ್ದಾರೆ. ಅವರ ನಿವೃತ್ತಿಯ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
