ಉದಯವಾಹಿನಿ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ದೇಶದ ಮೂಲೆ ಮೂಲೆಗಳಲ್ಲೂ ವಿವಿಧ ಅಭಿವೃದ್ಧಿ ಯೋಜನೆಗಳು ನಡೆಯುತ್ತಿವೆ. ಅದೇ ರೀತಿ ನಿಕೋಬಾರ್ ದ್ವೀಪದಲ್ಲೂ ಕೇಂದ್ರ ಸರ್ಕಾರ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಯ ಭಾಗವಾಗಿ ಗ್ರೇಟ್ ನಿಕೋಬಾರ್ ಯೋಜನೆಗೆ (Great ಕೈ ಹಾಕಿದೆ. ಈ ಯೋಜನೆ ಉದ್ದೇಶ, ಪ್ರಯೋಜನ, ವೆಚ್ಚ ಹಾಗೂ ಇದಕ್ಕೆ ಕಾಂಗ್ರೆಸ್ ನಾಯಕರ ವಿರೋಧ ಏಕೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ.
ಗ್ರೇಟ್ ನಿಕೋಬಾರ್ ಯೋಜನೆ…?
ಬಂಗಾಳ ಕೊಲ್ಲಿಯಲ್ಲಿರುವ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿರುವ ಗ್ರೇಟ್ ನಿಕೋಬಾರ್ ದ್ವೀಪದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಯೋಜನೆ ಇದಾಗಿದೆ. ಈ ಯೋಜನೆಯ ಭಾಗವಾಗಿ ಗ್ರೇಟ್ ನಿಕೋಬಾರ್ ದ್ವೀಪದಲ್ಲಿ ಬಂದರು, ವಿಮಾನ ನಿಲ್ದಾಣ, ವಿದ್ಯುತ್ ಮತ್ತು ನಗರ ಸೌಲಭ್ಯಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ.
ಯೋಜನೆಗೆ ಎಷ್ಟು ವೆಚ್ಚವಾಗಲಿದೆ..?
ಈ ಯೋಜನೆಯ ಒಟ್ಟು ವೆಚ್ಚ ಸುಮಾರು 81,000 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಈ ಅಭಿವೃದ್ಧಿಯಿಂದ ದ್ವೀಪವನ್ನು ಪ್ರವಾಸೋದ್ಯಮ ಕೇಂದ್ರವಾಗಿ ಪರಿವರ್ತನೆಯಾಗಲಿದೆ. ಇದು ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂಬುದು ಕೇಂದ್ರದ ಲೆಕ್ಕಾಚಾರ.
ಏನೆಲ್ಲ ಅಭಿವೃದ್ಧಿಯಾಗಲಿದೆ..?: ಅಂತಾರಾಷ್ಟ್ರೀಯ ಕಂಟೇನರ್ ಟ್ರಾನ್ಸ್‌ಶಿಪ್‌ಮೆಂಟ್ ಟರ್ಮಿನಲ್ (ICTT): ಇಲ್ಲಿ ಬೃಹದಾಕಾರದ ಬಂದರು ನಿರ್ಮಾಣ ಮಾಡಲಾಗುತ್ತದೆ. ಇದರಿಂದ ಸರಕು ಸಾಗಾಟಕ್ಕೆ ಅನುಕೂಲವಾಗಲಿದೆ. ಬಂದರುಗಳು ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸುತ್ತವೆ.
