ಉದಯವಾಹಿನಿ,ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲದವರು ನಮಗೆ ಪಾಠ ಮಾಡ್ತಾರೆ. ತಮಿಳುನಾಡಿನಿಂದ ಅಣ್ಣಾಮಲೈ ಬಂದು ನಮಗೆ ಮಾರ್ಗದರ್ಶನ ಕೊಡ್ತಾರೆ. ಏನು ಅಣ್ಣಾಮಲೈ ದೊಡ್ಡ ಹೀರೋನಾ? ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಈ ಮೂಲಕ ಬಿಜೆಪಿಯ ಅಂತರ್ಯುದ್ಧವನ್ನು ಮತ್ತೊಂದು ಹಂತಕ್ಕೆ ಹೊನ್ನಾಳಿಯ ಶಾಸಕ ತೆಗೆದುಕೊಂಡು ಹೋಗಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಗೆಲ್ಲದವರು ನಮಗೆ ಬಂದು ಪಾಠ ಮಾಡ್ತಾರೆ. ಅಣ್ಣಾಮಲೈ ಏನು ದೊಡ್ಡ ಹೀರೋನಾ? ಸೆಲ್ಯೂಟ್ ಹೊಡೆಯುತ್ತಿದ್ದವರಿಂದ ಬಸವರಾಜ ಬೊಮ್ಮಾಯಿ ಅವರು ಹೇಳಿಸಿಕೊಳ್ಳಬೇಕಾದ ಅನಿವಾರ್ಯತೆ, ಮುಜುಗರ ಸೃಷ್ಟಿಸಿದ್ದರು. ಇವೆಲ್ಲಾ ನನ್ನ ಮಾತುಗಳಲ್ಲ, ಕಾರ್ಯಕರ್ತರ ಭಾವನೆಗಳು. ಪ್ರಧಾನಿ ನರೇಂದ್ರ ಮೋದಿ ಬಂದು ಹೋದ ಮೇಲೆ ಅದನ್ನು ಮತಗಳಾಗಿ ಪರಿವರ್ತನೆ ಮಾಡುವ ಮುಖಗಳು ಬೇಕಲ್ವಾ? ಎಂದು ಕಿಡಿಕಾರಿದರು.
