ಉದಯವಾಹಿನಿ, ತಿರುವನಂತಪುರಂ: ಮೆದುಳು ತಿನ್ನುವ ಅಮೀಬಾ ಎನ್ನಲಾಗುವ ಸೋಂಕು ಕೋವಿಡ್ ಬಳಿಕ ಜನರಲ್ಲಿ ಭಾರಿ ಆತಂಕ ಮೂಡಿಸಿದೆ. ನೆಗ್ಲೇರಿಯಾ ಫೌಲೆರಿ ಹೆಸರಿನ ಈ ರೋಗಕ್ಕೆ ದಕ್ಷಿಣ ಕೋರಿಯಾದಲ್ಲಿ ಮೊದಲ ಬಲಿ ವರದಿಯಾಗಿತ್ತು. ಇದೀಗ ನೆರೆಯ ಕೇರಳಕ್ಕೂ ವ್ಯಾಪಿಸಿದ್ದು, ಇದೇ ವರ್ಷ 19 ಮಂದಿ ಬಲಿಯಾಗಿದ್ದಾರೆ. ಪ್ರಸಕ್ತ ವರ್ಷದಲ್ಲಿ ಕೇರಳದಲ್ಲಿ 61 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು 19 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಕೆಲವರು ಇತ್ತೀಚೆಗೆ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.
ಮೊದಲಿಗೆ ಕೋಝಿಕ್ಕೋಡ್ ಮತ್ತು ಮಲಪ್ಪುರಂನಂತಹ ಜಿಲ್ಲೆಗಳ ಕ್ಲಸ್ಟರ್‌ ನಲ್ಲಿ ಕಾಣಿಸಿಕೊಂಡಿದ್ದ ಸೋಂಕು ಬಳಿಕ ರಾಜ್ಯದ ವಿವಿಧೆಡೆ ವ್ಯಾಪಿಸಿದೆ. ಮೂರು ತಿಂಗಳ ಹಸುಗೂಸಿನಿಂದ 91 ವರ್ಷದ ವೃದ್ಧನವರೆಗೂ ಈ ಕಾಯಿಲೆ ಕಾಣಿಸಿಕೊಂಡಿದೆ. ಹೀಗಾಗಿ ಕೇರಳ ಈಗ ಗಂಭೀರ ಆರೋಗ್ಯ ಸವಾಲನ್ನು ಎದುರಿಸುತ್ತಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ನೆಗ್ಲೇರಿಯಾ ಫೌಲೆರಿ ಅಂದ್ರೇನು…?
ವರದಿಗಳ ಪ್ರಕಾರ 1962 ರಿಂದ ಇಲ್ಲಿಯವರೆಗೆ 154 ಜನರಲ್ಲಿ ಈ ಸೋಂಕು ಪತ್ತೆಯಾಗಿದೆ. ನೇಗ್ಲೇರಿಯಾ ಫೌಲೆರಿ ಎಂಬುದು ಒಂದು ಬಗೆಯ ಅಮೀಬಾ ರೀತಿಯ ಜೀವಿ. ಇವು ಸಾಮಾನ್ಯವಾಗಿ ಕೊಳಗಳು, ನದಿಗಳು, ಕೆರೆಗಳಂತಹ ನೀರಿನ ಪ್ರದೇಶ ಹಾಗೂ ಮಣ್ಣಿನಲ್ಲಿಯೂ ಕಂಡುಬರುತ್ತವೆ.

Leave a Reply

Your email address will not be published. Required fields are marked *

error: Content is protected !!