ಉದಯವಾಹಿನಿ, ರಿಯಾದ್: ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ರಿಯಾದ್ ಭೇಟಿಯ ಸಂದರ್ಭದಲ್ಲಿ ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ. ‘ಇಬ್ಬರಲ್ಲಿ ಯಾರ ಮೇಲೆಯೇ ಯುದ್ಧ ನಡೆಯಲಿ, ಎರಡೂ ದೇಶಗಳ ವಿರುದ್ಧ ಆಕ್ರಮಣ ಎಂದು ಪರಿಗಣಿಸುವುದು’ ಒಪ್ಪಂದದ ಪ್ರಮುಖ ಷರತ್ತಾಗಿದೆ.
ಈ ಕುರಿತು ಭಾರತ ಪ್ರತಿಕ್ರಿಯೆ ನೀಡಿದ್ದು, ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ನಡುವೆ ಕಾರ್ಯತಂತ್ರದ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕುವ ವರದಿಗಳನ್ನು ನಾವು ನೋಡಿದ್ದೇವೆ ಎಂದು ತಿಳಿಸಿದೆ. ಈ ಬೆಳವಣಿಗೆಯಿಂದ ನಮ್ಮ ರಾಷ್ಟ್ರೀಯ ಭದ್ರತೆಗೆ, ಪ್ರಾದೇಶಿಕ ಮತ್ತು ಜಾಗತಿಕ ಸ್ಥಿರತೆ ಮೇಲೆ ಬೀರಬಹುದಾದ ಪರಿಣಾಮಗಳ ಬಗ್ಗೆ ನಾವು ಅಧ್ಯಯನ ಮಾಡುತ್ತೇವೆ. ಭಾರತದ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಸಮಗ್ರ ರಾಷ್ಟ್ರೀಯ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ನಡುವೆ ಸುಮಾರು 8 ದಶಕಗಳಿಂದ ಐತಿಹಾಸಿಕ ಪಾಲುದಾರಿಕೆ ಇದೆ. ಹೀಗಾಗಿ, ಪರಸ್ಪರ ರಕ್ಷಣಾ ಒಪ್ಪಂದ ಮಾಡಿಕೊಳ್ಳಲಾಗಿದೆ. ಇಸ್ಲಾಮಿಕ್‌ ರಾಷ್ಟ್ರಗಳ ಒಗ್ಗಟ್ಟಿನ ದೃಷ್ಟಿಯಿಂದ ಒಪ್ಪಂದ ಆಗಿದೆ. ಈ ಒಪ್ಪಂದ ಎರಡೂ ದೇಶಗಳ ನಡುವಿನ ನಿಕಟ ರಕ್ಷಣಾ ಸಹಕಾರವನ್ನು ಆಧರಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!