ಉದಯವಾಹಿನಿ, ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಏಷ್ಯಾ ಕಪ್‌ ಟೂರ್ನಿಯಲ್ಲಿ ಹ್ಯಾಂಡ್‌ಶೇಕ್‌ ವಿವಾದದಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರಿ ಮುಜುಗರ ಅನುಭವಿಸಿರುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿಗೆ ಇದೀಗ ಮತ್ತೊಂದು ಹಿನ್ನಡೆಯಾಗಿದೆ. ಪಾಕಿಸ್ತಾನ ತಂಡದ ಆಟಗಾರರಿಗೆ ನೀಡಿರುವ ಕ್ರಿಕೆಟ್‌ ಕಿಟ್‌ ಕಳಪೆಯಿಂದ ಕೂಡಿದೆ ಎಂದು ಮಾಜಿ ಕ್ರಿಕೆಟಿಗ ಅತಿಕ್‌ ಉಝ್‌ ಝಮಾನ್‌ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಪಾಕಿಸ್ತಾನ ತಂಡದ ಕಿಟ್‌ ಟೆಂಡರ್‌ ಅನ್ನು ಸ್ನೇಹಿತರೊಬ್ಬರಿಗೆ ನೀಡಲಾಗಿದೆ ಎಂದು ಕೂಡ ಅವರು ಟೀಕಿಸಿದ್ದಾರೆ. ಪಾಕ್‌ ಆಟಗಾರರು ಧರಿಸಿರುವ ಜೆರ್ಸಿ ಉತ್ತಮ ಗುಣಮಟ್ಟವನ್ನು ಹೊಂದಿಲ್ಲ ಎಂದು ದೂರಿದ್ದಾರೆ.

ಯುಎಇ ವಿರುದ್ದದ ಪಂದ್ಯದ ಗೆಲುವಿನ ಬಳಿಕ ಪಾಕಿಸ್ತಾನ ತಂಡ ಏಷ್ಯಾ ಕಪ್‌ ಟೂರ್ನಿಯ ಸೂಪರ್‌ 4 ರ ಹಂತಕ್ಕೆ ಅರ್ಹತೆ ಪಡೆದಿದೆ. ಅಂದ ಹಾಗೆ ಯುಎಇ ವಿರುದ್ಧದ ಪಂದ್ಯದ ವೇಳೆ ಪಾಕಿಸ್ತಾನ ತಂಡದ ಆಟಗಾರರು ಬೆವರುತ್ತಿದ್ದರು ಹಾಗೂ ಜೆರ್ಸಿ ಒದ್ದೆಯಾಗುತ್ತಿತ್ತು ಮತ್ತು ಬೇಗ ಒಣಗುತ್ತಿರಲಿಲ್ಲ. ಆದರೆ, ಎದುರಾಳಿ ಆಟಗಾರರ ಜೆರ್ಸಿ ಬೆವರು ಬಹುಬೇಗ ಒಣಗುತ್ತಿತ್ತು. ಪಾಕಿಸ್ತಾನ ತಂಡದ ಕಿಟ್‌ ತಯಾರು ಮಾಡುವ ಟೆಂಡರ್‌ ಅನ್ನು ವೃತ್ತಿಪರ ಸಂಸ್ಥೆಗೆ ನೀಡದೆ, ಸ್ನೇಹಿತರೊಬ್ಬರಿಗೆ ನೀಡಲಾಗಿದೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಅತಿಕ್‌ ಉಝ್‌ ಝಮಾನ್‌ ಆರೋಪ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!