ಉದಯವಾಹಿನಿ, ಬೆಂಗಳೂರು: ಪರಿಸರ ಅಭಿವೃದ್ಧಿ ಸಂರಕ್ಷಣೆಗೆ ಮಾಧ್ಯಮಗಳು ಹೆಚ್ಚು ಒತ್ತು ನೀಡಬೇಕು. ಪತ್ರಕರ್ತರು ಪರಿಸರ ನ್ಯಾಯಕ್ಕೆ ಬದ್ಧವಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ
ಗಳೂರಿನ ವಾರ್ತಾಸೌಧದಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಸ್ವಾತಂತ್ರ್ಯ ಪೂರ್ವದ ಮಾಧ್ಯಮ ರಂಗಕ್ಕೂ ಇಂದಿನ ಮಾಧ್ಯಮ ರಂಗಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಸ್ವಾತಂತ್ರ್ಯೋತ್ತರ ಪತ್ರಿಕೋದ್ಯಮ ಶ್ರೀಮಂತರ ಕೈಗಳಿಗೆ ಸಿಕ್ಕಿಹಾಕಿಕೊಂಡಿದೆ. ಪತ್ರಕರ್ತರು ಇದನ್ನು ಅರ್ಥ ಮಾಡಿಕೊಂಡು ಕರ್ತವ್ಯ ನಿರ್ವಹಿಸಬೇಕಿದೆ ಎಂದರು.
ವಡ್ಡರ್ಸೆ ರಘುರಾಮ ಶೆಟ್ಟರು ಸಮ ಸಮಾಜ ನಿರ್ಮಾಣದ ಕನಸು ಕಂಡ ಪತ್ರಕರ್ತರು. ಜಾತಿ ಸಮಸ್ಯೆಗಳ ವಿರುದ್ಧ ಬರೆದವರು. ಸಮಾಜದ ಧ್ವನಿಯಂತೆ ಬಾಳಿದವರು. ಪತ್ರಿಕಾವೃತ್ತಿಯಲ್ಲಿ ತೊಡಗಿರುವವರಿಗೆ ವಡ್ಡರ್ಸೆಯವರಂತವರು ಮಾದರಿಯಾಗಲಿ ಎಂದು ಹೇಳಿದರು. ಮಾಧ್ಯಮಗಳ ಅಭಿಪ್ರಾಯಗಳು ವಸ್ತುಸ್ಥಿತಿಯಿಂದ ಕೂಡಿರಬೇಕು.

ಅನೇಕ ಬಾರಿ ಸುದ್ದಿಗಳಲ್ಲಿ ಊಹಾ ಪತ್ರಿಕೋದ್ಯಮ ಕಾಣುತ್ತದೆ, ಅದು ಆಗಬಾರದು. ಸತ್ಯ – ಅಸತ್ಯಗಳನ್ನು ಪತ್ತೆ ಹಚ್ಚಿ, ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು. ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನ ವಿರೋಧಿ ಕಾರ್ಯವನ್ನು ಸರ್ಕಾರ ಮಾಡಿದರೆ ಅದನ್ನೂ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು. ಸಾಮಾಜಿಕ ನ್ಯಾಯ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿರಬೇಕಾದ ವಿಚಾರವಲ್ಲ. ಎಲ್ಲರಿಗೂ ದೇಶದ ವ್ಯವಸ್ಥೆಯಲ್ಲಿ ಇನ್ನೂ ಸಹ ಸಮಾನವಾದ ಅವಕಾಶ ಸಿಗದಿರಲು ಕಾರಣಗಳೇನು ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಧ್ಯಮಗಳು ಮಾಡಬೇಕು ಎಂದರು.

Leave a Reply

Your email address will not be published. Required fields are marked *

error: Content is protected !!