ಉದಯವಾಹಿನಿ, ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಭದ್ರತಾಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಕಾರ್ಯಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ. ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಗೆ ಸೇರಿದವರು ಎಂದು ಶಂಕಿಸಲಾದ ಮೂರರಿಂದ ನಾಲ್ಕು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ. ಆರಂಭದಲ್ಲಿ, ಕಿಶ್ತ್ವಾರ್‌ನಲ್ಲಿ ಮತ್ತೊಂದು ಗುಂಡಿನ ಚಕಮಕಿ ನಡೆದಿದೆ ಎಂದು ಸೇನೆ ಹೇಳಿತ್ತು, ಆದರೆ ನಂತರ ಕಾರ್ಯಾಚರಣೆಯನ್ನು ಉಧಂಪುರಕ್ಕೆ ಸೀಮಿತಗೊಳಿಸಲಾಗಿದೆ ಎಂದು ಸೇನೆ ತಿಳಿಸಿದೆ.ಸೇನೆ ದೋಡಾ-ಉಧಂಪುರ ಗಡಿಯಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ” ಎಂದು ಹೇಳಿದೆ. “ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂದು ತಿಳಿಸಿದೆ. ದುಡು ಬಸಂತ್‌ಗಢ್ ಎತ್ತರದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರೊಂದಿಗೆ ಸಂಪರ್ಕ ಸಾಧಿಸಿದವು. ನಿರ್ದಿಷ್ಟ ಮಾಹಿತಿಯ ಮೇರೆಗೆ, ಸೇನೆ, ವಿಶೇಷ ಕಾರ್ಯಾಚರಣೆ ಗುಂಪು (SOG) ಮತ್ತು ಪೊಲೀಸರು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು, ಇದರ ಪರಿಣಾಮವಾಗಿ ಗುಂಡಿನ ಚಕಮಕಿ ನಡೆಯಿತು.
ಗುಂಡಿನ ಚಕಮಕಿಯಲ್ಲಿ ಒಬ್ಬ ಸೇನಾ ಜವಾನ್ ಗಾಯಗೊಂಡರು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಕಳುಹಿಸಲಾಯಿತು. ಆದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಕಳೆದ ಒಂದು ವರ್ಷದಲ್ಲಿ ಈ ಪ್ರದೇಶದಲ್ಲಿ ಹಲವಾರು ಗುಂಡಿನ ಚಕಮಕಿಗಳು ನಡೆದಿವೆ. ಜೂನ್ 26 ರಂದು ದುಡು-ಬಸಂತ್‌ಗಢ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತನಾದ ಭಯೋತ್ಪಾದಕ ಹೈದರ್, ಕಳೆದ ನಾಲ್ಕು ವರ್ಷಗಳಿಂದ ಈ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಜೆಇಎಂನ ಉನ್ನತ ಕಮಾಂಡರ್ ಆಗಿದ್ದ.
