ಉದಯವಾಹಿನಿ, ಬೆಂಗಳೂರು: ನಗರದಿಂದ ವಾರಣಾಸಿಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಪ್ರಯಾಣಿಕನೊಬ್ಬ ಆಕಸ್ಮಿಕವಾಗಿ ಕಾಕ್‌ಪಿಟ್‌ಗೆ ಪ್ರವೇಶಿಸಲು ಯತ್ನಿಸಿದ್ದಾನೆ. ಈ ಬಗ್ಗೆ ವಿಮಾನದ ಪೈಲಟ್ ಸಿದ್ಧಾರ್ಥ್ ಶರ್ಮಾ ಅವರು ‌ಎಟಿಸಿಗೆ ಸಂದೇಶ ನೀಡಿದ್ದು, ತನಿಖೆ ನಡೆಯುತ್ತಿದೆ.9 ಪ್ರಯಾಣಿಕರ ಗುಂಪಿನಲ್ಲಿ ಮಣಿ ಎಂಬ ಪ್ರಯಾಣಿಕ ಕಾಕ್‌ಪಿಟ್ ಬಾಗಿಲಿನ ಬಳಿ ಬಟನ್ ಒತ್ತಿ, ವಿಮಾನದಲ್ಲಿದ್ದ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದ. ಈ ಬಗ್ಗೆ ಆತನಿಗೆ ವಿಚಾರಿಸಿದಾಗ ತಾನು ಮೊದಲನೇ ಬಾರಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದು, ಈ ಬಗ್ಗೆ ತನಗೆ ತಿಳಿದಿಲ್ಲ ಎಂದಿದ್ದಾನೆ. CISF ಸಿಬ್ಬಂದಿ ವಿಚಾರಣೆಗಾಗಿ ಎಲ್ಲಾ 9 ಪ್ರಯಾಣಿಕರನ್ನು ವಶಕ್ಕೆ ಪಡೆದು, ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಈ ಬಗ್ಗೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು, ಶೌಚಾಲಯವನ್ನು ಹುಡುಕುತ್ತಾ ಪ್ರಯಾಣಿಕ ಆಕಸ್ಮಿಕವಾಗಿ ಕಾಕ್‌ಪಿಟ್ ಬಳಿ ಬಂದು ಬಟನ್‌ ಒತ್ತಿರುವ ಬಗ್ಗೆ ವರದಿಯಾಗಿದೆ. ಈ ವರದಿ ನಮ್ಮ ಗಮನಕ್ಕೆ ಬಂದಿದೆ. ಸುರಕ್ಷತೆ ಮತ್ತು ಭದ್ರತಾ ಪ್ರೋಟೋಕಾಲ್‌ಗಳ ಅಡಿಯಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳಿಗೆ ನಾವು ಮಾಹಿತಿ ನೀಡಿದ್ದೇವೆ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!