ಉದಯವಾಹಿನಿ, ಮುಂಬೈ: ಐಷಾರಾಮಿ ಲ್ಯಾಂಬೋರ್ಘಿನಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಜಖಂಗೊಂಡ ಘಟನೆ ಮುಂಬೈನಲ್ಲಿ ನಡೆದಿದೆ. ಶನಿವಾರ ಬೆಳಿಗ್ಗೆ 9:15 ರ ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಮಳೆ ಬರುತ್ತಿರುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿ ಘಟನೆಯ ನಂತರದ ದೃಶ್ಯಾವಳಿಗಳನ್ನು ತೋರಿಸಲಾಗಿದೆ.

ಈ ವಿಡಿಯೊದಲ್ಲಿ ಕಿತ್ತಳೆ ಬಣ್ಣದ ಲ್ಯಾಂಬೋರ್ಘಿನಿ ಕಾರು ಜಖಂಗೊಂಡ ಸ್ಥಿತಿಯಲ್ಲಿರುವುದನ್ನು ಕಾಣಬಹುದಾಗಿದೆ. ಅಪಘಾತ ಸಂಭವಿಸುವ ಕೆಲವು ಕ್ಷಣಗಳ ಮೊದಲು, ನಿಯಂತ್ರಣ ತಪ್ಪಿದ ಕಾರು ಕೂಡ ವಿಡಿಯೊದಲ್ಲಿ ಸೆರೆಯಾಗಿದೆ. ಐಷಾರಾಮಿ ಕಾರಿನ ಮುಂಭಾಗಕ್ಕೆ ಗಮನಾರ್ಹ ಹಾನಿಯಾಗಿದ್ದು, ಬಂಪರ್ ಮತ್ತು ಹುಡ್ ಜಖಂಗೊಂಡಿದೆ. ಮುಂಭಾಗದ ಟ್ರಂಕ್ ತೆರೆದಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಇದು ಕಾರಿಗೆ ಎಷ್ಟು ಹಾನಿಯಾಗಿದೆ ಎಂಬುದನ್ನು ತೋರಿಸುತ್ತದೆ. ಹಲವಾರು ಮಂದಿ ಕಾರಿನ ಸುತ್ತಲೂ ನಿಂತಿರುವುದು ಕಂಡುಬಂದಿದೆ.
ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ತಲುಪಿದ್ದು, ಇಲ್ಲಿಯವರೆಗೆ ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ. ರೇಮಂಡ್ ಗ್ರೂಪ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಗೌತಮ್ ಸಿಂಘಾನಿಯಾ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಬಳಕೆದಾರರು ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಮುಂಬೈನ ಕರಾವಳಿ ರಸ್ತೆಯಲ್ಲಿ ಬೆಳಗ್ಗೆ 9:15ಕ್ಕೆ ಲ್ಯಾಂಬೋರ್ಘಿನಿ ಕಾರಿನ ಅಪಘಾತ ಸಂಭವಿಸಿದೆ. ಈ ಕಾರುಗಳು ನಿಯಂತ್ರಣಕ್ಕೆ ಸಿಗುವುದಿಲ್ಲವೆ? ಲ್ಯಾಂಬೋರ್ಘಿನಿಗೆ ಏನಾಗುತ್ತಿದೆ ಎಂದು ವಿಡಿಯೊಗೆ ಶೀರ್ಷಿಕೆ ನೀಡಿ ಪೋಸ್ಟ್ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!