ಉದಯವಾಹಿನಿ, ಗದಗ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದೆ. 2ನೇ ದಿನವೂ ಸರ್ವೆ ಕಾರ್ಯಕ್ಕೆ ವಿಘ್ನ ಎದುರಾಗಿದೆ. ಗದಗ ನಗರದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸಿಬ್ಬಂದಿ ಸರ್ವರ್ ಸಮಸ್ಯೆಯಿಂದ ಪರದಾಡಿದ್ದಾರೆ.
ಸಮೀಕ್ಷೆಯ ಆಪ್ ಓಪನ್ ಆಗುತ್ತಿರಲಿಲ್ಲ. ಇನ್ನು ಕೆಲವು ಮೊಬೈಲ್‌ನಲ್ಲಿ ಓಪನ್ ಆದ್ರೂ ಓಟಿಪಿ ಬರುತ್ತಿರಲಿಲ್ಲ. ಅಪ್ಡೇಟ್ ಕೇಳಿ ತಂತಾನೆ ಆಪ್ ಕ್ಲೋಸ್ ಆಗುತ್ತಿತ್ತು. ಸರ್ವೆ ಸಂಬಂಧಿಸಿದ ಯುಹೆಚ್‌ಐಡಿ ಸ್ಟಿಕ್ಕರ್ ಸರಿಯಾಗಿ ಅಂಟಿಸಿರಲಿಲ್ಲ ಈ ರೀತಿಯಾದ ಸಮಸ್ಯೆಯನ್ನು ಸಿಬ್ಬಂದಿ ಎದುರಿಸುತ್ತಿದ್ದಾರೆ.
ಕೆಲವು ಕಡೆಗಳಲ್ಲಿ ಸರಿಯಾಗಿ ಲೊಕೇಷನ್ ತೋರಿಸದೇ ಎಲ್ಲೆಲ್ಲೋ ತೋರಿಸುತ್ತಿದೆ. ಒಂದು ಮನೆ ಅರ್ಜಿ ಭರ್ತಿ ಮಾಡಲು 2 ರಿಂದ 3 ಗಂಟೆ ತೆಗೆದುಕೊಳ್ಳುತ್ತಿದೆ. ನಾಲ್ಕೈದು ಬಾರಿ ಒಟಿಪಿ ತೆಗೆದುಕೊಳ್ಳುತ್ತದೆ. ಪದೇಪದೇ ಒಟಿಪಿ ಹೇಳಲು ಜನರು ಹಿಂದೇಟು ಹಾಕ್ತಿದ್ದಾರೆ.
ಇನ್ನು ಕೆಲವು ಮನೆಗಳಲ್ಲಿ ಸ್ಟಿಕ್ಕರ್ ಕಿತ್ತು ಹಾಕಿದ್ದಾರೆ. ಕೆಲವು ಮನೆಗಳಲ್ಲಿ ಬರಬೇಡಿ ಹೋಗಿ ಅಂತಾರೆ. ಇನ್ನು ಕೆಲವರು ಎಷ್ಟು ಸಮಯಬೇಕು ನಿಮಗೆ ಸಾಕು ಎದ್ದು ಹೋಗಿ ಎನ್ನುತ್ತಿದ್ದಾರೆಂದು ಸಿಬ್ಬಂದಿ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ.
