ಉದಯವಾಹಿನಿ, ನವದೆಹಲಿ: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ನಿಧಾನಗತಿಯ ಓವರ್ ದರ ಕಾಯ್ದುಕೊಂಡಿದ್ದಕ್ಕಾಗಿ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ದಂಡ ವಿಧಿಸಲಾಗಿದೆ. ಭಾರತ ತಂಡ ನಿಗದಿತ ಸಮಯದ ವೇಳೆ ಎರಡು ಓವರ್‌ಗಳು ಹಿಂದಿದ್ದ ಕಾರಣ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಪಂದ್ಯ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಿದೆ.ಐಸಿಸಿ ಅಂತರರಾಷ್ಟ್ರೀಯ ಪಂದ್ಯ ರೆಫರಿಗಳ ಸಮಿತಿಯ ಜಿ.ಎಸ್. ಲಕ್ಷ್ಮಿ ಅವರು ಈ ಶಿಕ್ಷೆಯನ್ನು ವಿಧಿಸಿದ್ದಾರೆ. ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅಪರಾಧಕ್ಕೆ ತಪ್ಪೊಪ್ಪಿಕೊಂಡರು ಮತ್ತು ಶಿಕ್ಷೆಯನ್ನು ಸ್ವೀಕರಿಸಿದರು, ಆದ್ದರಿಂದ ಔಪಚಾರಿಕ ವಿಚಾರಣೆಯ ಅಗತ್ಯವಿಲ್ಲ ಎಂದು ಐಸಿಸಿ ತಿಳಿಸಿದೆ.

“ಐಸಿಸಿ ಆಟಗಾರರು ಮತ್ತು ಆಟಗಾರರ ಬೆಂಬಲ ಸಿಬ್ಬಂದಿಯ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಪ್ರಕಾರ, ಕನಿಷ್ಠ ಓವರ್-ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ, ಆಟಗಾರರು ನಿಗದಿತ ಸಮಯದಲ್ಲಿ ಬೌಲ್ ಮಾಡಲು ವಿಫಲವಾದ ಪ್ರತಿ ಓವರ್‌ಗೆ ಅವರ ಪಂದ್ಯ ಶುಲ್ಕದ ಶೇಕಡಾ ಐದು ರಷ್ಟು ದಂಡ ವಿಧಿಸಲಾಗುತ್ತದೆ” ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ. ದ್ವಿತೀಯ ಪಂದ್ಯದಲ್ಲಿ ನಿಧಾನಗತಿಯ ಓವರ್‌ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಆಸ್ಟ್ರೇಲಿಯಾ ಮಹಿಳಾ ತಂಡಕ್ಕೂ ಐಸಿಸಿ ಪಂದ್ಯದ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಿತ್ತು.

Leave a Reply

Your email address will not be published. Required fields are marked *

error: Content is protected !!