ಉದಯವಾಹಿನಿ, ಸಿಡ್ನಿ: ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾದ ಪ್ರಶಸ್ತಿ ರಕ್ಷಣೆಗೆ ಹೊಡೆತ ಬಿದ್ದಿದೆ. ಭಾರತ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ತಂಡ ಸ್ಟಾರ್‌ ಆಲ್‌ರೌಂಡರ್ ಗ್ರೇಸ್ ಹ್ಯಾರಿಸ್ ವಿಶ್ವಕಪ್‌ನಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಹೀದರ್ ಗ್ರಹಾಂ ತಂಡ ಸೇರಿದ್ದಾರೆ.
ಕೆಳ ಕ್ರಮಾಂಕದಲ್ಲಿ ಪವರ್-ಹಿಟ್ಟಿಂಗ್‌ ಬ್ಯಾಟಿಂಗ್‌ಗೆ ಹೆಸರುವಾಸಿಯಾದ ಹ್ಯಾರಿಸ್, ಬ್ಯಾಟಿಂಗ್‌ ಮಾತ್ರವಲ್ಲದೆ ಬೌಲಿಂಗ್‌ನಲ್ಲಿಯೂ ತಂಡಕ್ಕೆ ನೆರವಾಗುತ್ತಿದ್ದರು. ಅವರ ಸೇವೆ ಕಳೆದುಕೊಂಡಿರುವುದು ಆಸೀಸ್‌ಗೆ ದೊಡ್ಡ ಹೊಡೆತ ಎಂದರೂ ತಪ್ಪಾಗಲಾರದು. ಹೀದರ್ ಗ್ರಹಾಂ, ವೇಗದ ಬೌಲಿಂಗ್ ಆಲ್‌ರೌಂಡರ್ ಇದುವರೆಗೆ ಆರು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಒಂಬತ್ತು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಹ್ಯಾರಿಸ್ 2022 ರ ಏಕದಿನ ವಿಶ್ವಕಪ್‌ನಲ್ಲಿ ತಂಡದ ಭಾಗವಾಗಿದ್ದರು. ಆದರೆ ಒಂದೇ ಒಂದು ಪಂದ್ಯದಲ್ಲಿಯೂ ಆಡುವ ಅವಕಾಶ ಸಿಕ್ಕಿರಲಿಲ್ಲ. ವಿಶ್ವಕಪ್‌ ಪಂದ್ಯಾವಳಿ ಸೆ.30 ರಿಂದ ಆರಂಭಗೊಳ್ಳಲಿದೆ. ಆಸ್ಟ್ರೇಲಿಯಾ ತನ್ನ ಮೊದಲ ಪಂದ್ಯವನ್ನು ಅ.1 ನ್ಯೂಜಿಲ್ಯಾಂಡ್‌ ವಿರುದ್ಧ ಆಡಲಿದೆ.

ಪರಿಷ್ಕೃತ ಆಸ್ಟ್ರೇಲಿಯಾ ತಂಡ: ಅಲಿಸಾ ಹೀಲಿ (ನಾಯಕಿ), ಡಾರ್ಸಿ ಬ್ರೌನ್, ಆಶ್ ಗಾರ್ಡ್ನರ್, ಕಿಮ್ ಗಾರ್ತ್, ಹೀದರ್ ಗ್ರಹಾಂ, ಅಲಾನಾ ಕಿಂಗ್, ಫೋಬೆ ಲಿಚ್‌ಫೀಲ್ಡ್, ತಹ್ಲಿಯಾ ಮೆಕ್‌ಗ್ರಾತ್, ಸೋಫಿ ಮೊಲಿನಿಯಕ್ಸ್, ಬೆತ್ ಮೂನಿ, ಎಲಿಸ್ ಪೆರ್ರಿ, ಮೇಗನ್ ಶುಟ್, ಅನ್ನಾಬೆಲ್ ಸದರ್ಲ್ಯಾಂಡ್, ಜಾರ್ಜಿಯಾ ವೋಲ್, ಜಾರ್ಜಿಯಾ ವೇರ್‌ಹ್ಯಾಮ್

Leave a Reply

Your email address will not be published. Required fields are marked *

error: Content is protected !!