ಉದಯವಾಹಿನಿ, ಕೊಪ್ಪಳ: ರಾಜ್ಯ ರಾಜಕೀಯದಲ್ಲಿ ಗಮನ ಸೆಳೆದು, ಸಚಿವ ಶಿವರಾಜ ತಂಗಡಗಿ ರಾಜೀನಾಮೆಗೆ ಕಾರಣವಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣದ ತೀರ್ಪು ಅ.3ರಂದು ಪ್ರಕಟಗೊಳ್ಳಲಿದೆ.
ಸುದೀರ್ಘ 10 ವರ್ಷದ ವಿಚಾರಣೆ ನಂತರ ಕೊಪ್ಪಳ ಜಿಲ್ಲಾ ನ್ಯಾಯಾಲಯ ಪ್ರಕರಣದ ಅಂತಿಮ ವಿಚಾರಣೆ ನಡೆಸಿತು. ಪ್ರಕರಣದ ಆರೋಪಿಗಳಾದ ಹನುಮೇಶ ನಾಯಕ, ಮಾಹಾಂತೇಶ ನಾಯಕ, ಮನೋಜ ಪಾಟೀಲ್, ಬಾಳನಗೌಡ, ಕಾಡ್ ಮಂಜ, ನಂದೀಶ, ಪರಶುರಾಮ, ಯಮನೂರಪ್ಪ, ದುರ್ಗಪ್ಪ ಕೋರ್ಟ್ಗೆ ಹಾಜರಾಗಿದ್ದರು. ವಕೀಲರು ಪರ- ವಿರೋಧ ವಾದ ಮಂಡಿಸಿದರು. ಈ ಪ್ರಕರಣ ಸಂಬಂಧ ಸುದೀರ್ಘ ಹತ್ತು ವರ್ಷ ವಿಚಾರಣೆ ನಡೆದಿದ್ದು, ಇದೀಗ ವಾದ-ಪ್ರತಿವಾದ ಆಲಿಸಿದ ಜಿಲ್ಲಾ ನ್ಯಾಯಾಲಯ ಅ.3ಕ್ಕೆ ಆದೇಶ ಪ್ರಕಟಿಸಲಿದೆ.

ಏನಿದು ಪ್ರಕರಣ…?: ಕನಕಗಿರಿ ತಾಲೂಕಿನ ಕನಕಾಪುರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ತಮ್ಮೂರಿನಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದ್ದ. ಈ ಬೆಳವಣಿಗೆ ಬೆನ್ನಲ್ಲೇ 2015ರ ಜನವರಿ 11ರಂದು ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಯಲ್ಲಾಲಿಂಗನ ಕೊಲೆ ನಡೆದಿತ್ತು. ಸಚಿವ ಶಿವರಾಜ ತಂಗಡಗಿ ಆಪ್ತ ಹನುಮೇಶ ನಾಯಕ ಸೇರಿ 9 ಜನರ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರಾಜ್ಯ, ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು.

Leave a Reply

Your email address will not be published. Required fields are marked *

error: Content is protected !!