ಉದಯವಾಹಿನಿ,ವಿಜಯನಗರ: ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ಎರಡು ಆಟೋ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಸ್ಥಳದಲ್ಲೇ 6 ಜನರು ಸಾವನ್ನಪ್ಪಿದ್ದರು.ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ಎರಡು ಆಟೋ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಇನ್ನೋರ್ವ ವ್ಯಕ್ತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬಳ್ಳಾರಿಯಿಂದ ತುಂಗಭದ್ರಾ ಡ್ಯಾಂ ಗೆ ಆಟೋದಲ್ಲಿ ಒಟ್ಟು 19 ಜನರು ಪ್ರಯಾಣಿಸುತ್ತಿದ್ದರು. ಈ ವೇಳೆ ವಡ್ಡರಹಳ್ಳಿ ಸೇತುವೆ ಬಳಿ ಎರಡು ಆಟೋ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಆಟೊ ಚಾಲಕ ಸೇರಿ ಒಟ್ಟು 7 ಜನರು ಸಾವನ್ನಪ್ಪಿದ್ದರೆ ಹಲವು ಮಂದಿ ಗಾಯಗೊಂಡಿದ್ದಾರೆ. ಈ ನಡುವೆ ಅಪಘಾತದಲ್ಲಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ 2 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಗಾಯಾಳುಗಳ ಚಿಕಿತ್ಸೆಗಾಗಿ 50 ಸಾವಿರ ರೂಪಾಯಿ ನೀಡಲಾಗುತ್ತಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಸಚಿವ ನಾಗೇಂದ್ರ ತಿಳಿಸಿದ್ದಾರೆ.
