ಉದಯವಾಹಿನಿ, ನ್ಯೂಯಾರ್ಕ್​,  24: ಜಗತ್ತಿನಾದ್ಯಂತ ನಡೆಯುತ್ತಿರುವ ಸಂಘರ್ಷಗಳನ್ನು ಪರಿಹರಿಸುವಲ್ಲಿ ಭಾರತವು ಬಹಳ ಮುಖ್ಯ ಪಾತ್ರವನ್ನು ವಹಿಸಬಲ್ಲದು ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅಭಿಪ್ರಾಯಪಟ್ಟಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಭಾಗವಹಿಸಿ ಮಾತನಾಡಿದ ಅವರು, ಜಗತ್ತಿನಾದ್ಯಂತ ನಡೆಯುತ್ತಿರುವ ಯುದ್ಧಗಳನ್ನು ಪರಿಹರಿಸುವಲ್ಲಿ ಭಾರತದ ಪಾತ್ರದ ಬಗ್ಗೆ ಕೇಳಿದಾಗ, ಭಾರತ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ ಎಂದು ನಾನು ಭಾವಿಸುತ್ತೇನೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಧಾನಿ ಮೆಲೋನಿ ದೂರವಾಣಿ ಸಂಭಾಷಣೆ ನಡೆಸಿದ ವಾರಗಳ ನಂತರ ಅವರ ಹೇಳಿಕೆ ಬಂದಿದೆ.ಇದರಲ್ಲಿ ಇಬ್ಬರೂ ನಾಯಕರು ಜಾಗತಿಕ ಮತ್ತು ಪ್ರಾದೇಶಿಕ ಸಮಸ್ಯೆಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದರು.ಇತ್ತೀಚಿನ ಮಾತುಕತೆಗಳ ಸಂದರ್ಭದಲ್ಲಿ, ಉಕ್ರೇನ್‌ನಲ್ಲಿನ ಸಂಘರ್ಷದ ಶಾಂತಿಯುತ ಪರಿಹಾರದ ಮಹತ್ವವನ್ನು ಉಭಯ ನಾಯಕರು ಒತ್ತಿ ಹೇಳಿದ್ದರು. ಯುದ್ಧವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿರುವ ರಾಜತಾಂತ್ರಿಕ ಪ್ರಯತ್ನಗಳಿಗೆ ಭಾರತದ ಸಂಪೂರ್ಣ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದರು. ಹೂಡಿಕೆ, ರಕ್ಷಣೆ, ಭದ್ರತೆ, ಬಾಹ್ಯಾಕಾಶ, ವಿಜ್ಞಾನ ಮತ್ತು ತಂತ್ರಜ್ಞಾನ, ಶಿಕ್ಷಣ, ಭಯೋತ್ಪಾದನೆ ನಿಗ್ರಹ ಹೀಗೆ ಭಾರತ-ಇಟಲಿ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿಯ ಬಗ್ಗೆ ಮಾತನಾಡಿದ್ದರು.

Leave a Reply

Your email address will not be published. Required fields are marked *

error: Content is protected !!