ಉದಯವಾಹಿನಿ, ದುಬೈ: ಪ್ರಸ್ತುತ ನಡೆಯುತ್ತಿರುವ 2025ರ ಏಷ್ಯಾ ಕಪ್ ಟೂರ್ನಿಯು ಅಂತಿಮ ಹಂತವನ್ನು ತಲುಪಿದೆ. ಸೆಪ್ಟಂಬರ್‌ 28 ರಂದು ಭಾನುವಾರ ನಡೆಯುವ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಕಾದಾಟ ನಡೆಸಲಿವೆ. ಟೂರ್ನಿಯಲ್ಲಿ ಈಗಾಗಲೇ ಉಭಯ ತಂಡಗಳು ಎರಡು ಬಾರಿ ಮುಖಾಮುಖಿಯಾಗಿವೆ. ಎರಡು ಬಾರಿಯೂ ಕೂಡ ಟೀಮ್ ಇಂಡಿಯಾ, ಪಾಕಿಸ್ತಾನವನ್ನು ಮಣಿಸಿದೆ. ಗುರುವಾರ ಬಾಂಗ್ಲಾದೇಶ ವಿರುದ್ಧ ನಡೆದಿದ್ದ ಸೂಪರ್-4ರ ಪಂದ್ಯದಲ್ಲಿ ಪಾಕ್ 11 ರನ್‌ಗಳ ಜಯಗಳಿಸಿ ಫೈನಲ್‌ಗೆ ಪ್ರವೇಶ ಮಾಡಿತ್ತು. ಈ ಹಿನ್ನೆಲೆ ಪಾಕ್ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ 2025ರ ಏಷ್ಯಾ ಕಪ್ ಫೈನಲ್‌ ಪಂದ್ಯದಲ್ಲಿ ಭಾರತವನ್ನು ಧೈರ್ಯದಿಂದ ಎದುರಿಸುವಂತೆ ಪಾಕಿಸ್ತಾನಕ್ಕೆ ಸಲಹೆ ನೀಡಿದ್ದಾರೆ. ಏಷ್ಯಾ ಕಪ್ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿ ಎರಡೂ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿವೆ.
ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶೋಯೆಬ್‌ ಅಖ್ತರ್, ಸೆಪ್ಟೆಂಬರ್ 28ರ ಭಾನುವಾರದಂದು ನಡೆಯುವ ಫೈನಲ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಪ್ರದರ್ಶಿಸಿದ ಮನಸ್ಥಿತಿಯನ್ನೇ ಪ್ರದರ್ಶಿಸಬೇಕೆಂದು ಪಾಕಿಸ್ತಾನ ತಂಡಕ್ಕೆ ಮಾಜಿ ವೇಗಿ ಶೋಯೆಬ್ ಅಖ್ತರ್ ಸಲಹೆ ನೀಡಿದ್ದಾರೆ. ಗುರುವಾರ ಬಾಂಗ್ಲಾದೇಶ ವಿರುದ್ಧ 11 ರನ್‌ಗಳ ಜಯದೊಂದಿಗೆ ಪಾಕಿಸ್ತಾನ ತಂಡ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿದೆ. ಏಷ್ಯಾ ಕಪ್ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿ ಎರಡೂ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿವೆ.

Leave a Reply

Your email address will not be published. Required fields are marked *

error: Content is protected !!