ಉದಯವಾಹಿನಿ, ನವದೆಹಲಿ: ವೆಸ್ಟ್ ಇಂಡೀಸ್ ವಿರುದ್ದದ ಟೆಸ್ಟ್‌ ಸರಣಿಗೆ ಭಾರತ ತಂಡವನ್ನು ) ಪ್ರಕಟಿಸಲಾಗಿದೆ. ತಂಡಕ್ಕೆ ಹಲವು ಬಲಿಷ್ಠ ಆಟಗಾರರನ್ನು ಸೇರಿಸಲಾಗಿದೆ. ಆದಾಗ್ಯೂ, ಸರ್ಫರಾಜ್ ಖಾನ್ ಅವರನ್ನು ಮತ್ತೊಮ್ಮೆ 15 ಸದಸ್ಯರ ತಂಡದಿಂದ ಹೊರಗಿಡಲಾಗಿದೆ. ದೇಶಿ ಕ್ರಿಕೆಟ್‌ನಲ್ಲಿ ಉತ್ತಮ ರನ್ ಗಳಿಸಿದ ಸರ್ಫರಾಜ್ ಖಾನ್ ಅವರಿಗೆ 2024ರ ನವೆಂಬರ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ತವರು ಸರಣಿಯಲ್ಲಿ ಭಾರತ ಪರ ಟೆಸ್ಟ್ ಕ್ರಿಕೆಟ್ ಆಡಲು ಅವಕಾಶ ನೀಡಲಾಗಿತ್ತು.

ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಅವರು 17 ಕೆಜಿ ತೂಕ ಇಳಿಸಿಕೊಂಡಿದ್ದರು. ಆದರೆ ಅವರು ಇನ್ನೂ ತಂಡಕ್ಕೆ ಸೇರಿಕೊಂಡಿಲ್ಲ. ಇದದೀಗ ಅವರನ್ನು ಮತ್ತೊಮ್ಮೆ ಕೈಬಿಡಲಾಗಿದೆ. ಸರ್ಫರಾಜ್ ಖಾನ್‌ ಅವರು ಗಾಯಗೊಂಡಿದ್ದಾರೆ, ಅದಕ್ಕಾಗಿಯೇ ಅವರನ್ನು ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿಲ್ಲ ಎಂದು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಹೇಳಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ಪ್ರಕಾರ, ಮುಂಬೈ ಬ್ಯಾಟ್ಸ್‌ಮನ್ ಅಕ್ಟೋಬರ್ 15 ರೊಳಗೆ ರಣಜಿ ಟ್ರೋಫಿಗೆ ಮರಳಬಹುದು.

Leave a Reply

Your email address will not be published. Required fields are marked *

error: Content is protected !!