ಉದಯವಾಹಿನಿ, ದಾವಣಗೆರೆ: ನಗರದ ದೇವಸ್ಥಾನವೊಂದರ ಮುಂದೆ ಅನ್ಯಕೋಮಿನ ಯುವಕನೊಬ್ಬ ತಲ್ವಾರ್ ಹಿಡಿದು ಓಡಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ದಾವಣಗೆರೆಯ ಮಟ್ಟಿಕಲ್‌ನಲ್ಲಿರುವ ಬಸವೇಶ್ವರ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಯುವಕ ತಲ್ವಾರ್ ಹಿಡಿದು ಓಡಾಡಿದ್ದಾನೆ. ಇದನ್ನು ಸಾರ್ವಜನಿಕರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಯುವಕ ಯಾವ ಕಾರಣಕ್ಕೆ ತಲ್ವಾರ್ ಹಿಡಿದು ಓಡಾಡಿದ್ದಾನೆ ಎಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕೇಸ್ ದಾಖಲಾದರೂ ತಲ್ವಾರ್ ಹಿಡಿದು ಓಡಾಡಿದ ವ್ಯಕ್ತಿಯನ್ನು ಬಂಧಿಸಿಲ್ಲ ಎಂದು ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಆತನನ್ನು ಬಂಧಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಹಿಂದೂ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
