ಉದಯವಾಹಿನಿ, ಮಡಿಕೇರಿ: ಅದು ಪ್ರಕೃತಿಯ ತವರು ಕೊಡಗು ದೇಶ ವಿದೇಶಗಳ ಜನರು ನಿತ್ಯ ಈ ಊರಿಗೆ ಭೇಟಿ ನೀಡಿ ಪ್ರಕೃತಿಯ ಮಡಿಲಲ್ಲಿ ದಿನ ಕಳೆಯುತ್ತಾರೆ. ಬೆಟ್ಟಗುಡ್ಡಗಳ ಹಸಿರಿನ ವಾತಾವರಣ ಕಂಡು ಖುಷಿಯಿಂದ ತೆರಳುತ್ತಾರೆ. ಇದರಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಪ್ರವಾಸೋದ್ಯಮ (Tourism) ಚಟುವಟಿಕೆಗಳು ಹೆಚ್ಚಾಗುತ್ತಿದೆ. ಇಂತಹ ಕೊಡಗಿನಲ್ಲಿ ಕೆಲ ದುರುಳರು ಹಣದ ಆಸೆಗೆ ಬೃಹತ್ ಬೆಟ್ಟಗಳನ್ನೇ ನಾಶ ಮಾಡಲು ಹೊರಟಿದ್ದಾರೆ. ಇಡೀ ಬೆಟ್ಟ ಪ್ರದೇಶವನ್ನೇ ರಕ್ಕಸನ ಬಾಯಿಯಂತೆ ನುಂಗುತ್ತಿದ್ದಾರೆ. ಹೀಗಾಗಿ ಆ ಊರ ಸುತ್ತಮುತ್ತ ಪ್ರದೇಶಗಳಲ್ಲಿ ವಾಸ ಮಾಡುವ ಜನರು ದಿನ ಕಳೆದಂತೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಅನ್ನೋ ಆರೋಪವೂ ಕೇಳಿಬಂದಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನೇರುಗಳಲೆ ಪಂಚಾಯತಿ ವ್ಯಾಪ್ತಿಯ ಯಲಕನೂರು ಹಾಗೂ ಹೊಸಳ್ಳಿ ಗ್ರಾಮದಲ್ಲಿ ಕೆಲ ದುರುಳರು ಪ್ರಕೃತಿಯ ಒಡಲಿಗೆ ಕೈಹಾಕಿದ್ದಾರೆ. ಲಾರಿ, ಇಟಾಚಿಗಳನ್ನ ಬಳಸಿಕೊಂಡು ಹಗಲು ರಾತ್ರಿ ಎನ್ನದೇ ಬಾರಿ ಸ್ಫೋಟಕಗಳನ್ನು ಸಿಡಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದಾರೆ. ಇದರಿಂದ ಹಲವಾರು ಜನರು ಅನಾರೋಗ್ಯ ಸಮಸ್ಯೆ ಎದುರಿಸಬೇಕಾಗಿದೆ.

Leave a Reply

Your email address will not be published. Required fields are marked *

error: Content is protected !!