ಉದಯವಾಹಿನಿ, ವಿಜಯಪುರ: ನೆರೆಯ ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ ಉಜನಿ, ವೀರಾ ಜಲಾಶಯದಿಂದ 2.90 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದರಿಂದ ವಿಜಯಪುರದ ಭೀಮಾ ನದಿ ಪಾತ್ರದಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.
ಆಲಮೇಲ ತಾಲೂಕಿನ ತಾವರಖೇಡ ಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ 8 ಮಂದಿಯನ್ನು ಸಿಂದಗಿ ಅಗ್ನಿಶಾಮಕ ಸಿಬ್ಬಂದಿ ಬೋಟ್‌ ಮೂಲಕ ರಕ್ಷಣೆ ಮಾಡಿದ್ದಾರೆ. ಸದ್ಯ ತಾವರಖೇಡ ಗ್ರಾಮವನ್ನು ಭೀಮಾ ನದಿಯ ನೀರು ಸುತ್ತುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಕಲಬುರಗಿಯ ಗಾಣಗಾಪೂರದ ಸಂಗಮ ಕ್ಷೇತ್ರ ಜಲಾವೃತಗೊಂಡಿದೆ. ಇತ್ತ ಮಹಾರಾಷ್ಟ್ರದ ಜಲಾಶಯಗಳಿಂದ ನಿರಂತರವಾಗಿ ನೀರು ಬಿಡ್ತಿರೋ ಪರಿಣಾಮ ಭೀಮಾ ನದಿ ಅತ್ಯಂತ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರೈತರ ಜಮೀನುಗಳಿಗೆ ನೀರು ನುಗ್ಗಿದ್ದು ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ.

Leave a Reply

Your email address will not be published. Required fields are marked *

error: Content is protected !!