ಉದಯವಾಹಿನಿ,ಹುಬ್ಬಳ್ಳಿ: ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿ ಹಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಗದಗ ರಸ್ತೆಯಲ್ಲಿ ನಡೆದಿದೆ. ಶಿವಕುಮಾರ (50) ಅವರ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು, ಮುಖ, ತಲೆ ಹಾಗೂ ಕೈಕಾಲುಗಳಿಗೆ ಗಾಯ ಮಾಡಿದ್ದಾರೆ. ಹಣ, ವಸ್ತು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
