ಉದಯವಾಹಿನಿ, ಕೋಲಾರ: ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ಡಿಕ್ಕಿಯಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೈವಾಕ್ ಮುರಿದು ಬಿದ್ದ ಪರಿಣಾಮ ಕಾರು ಜಖಂಗೊಂಡ ಘಟನೆ ಕೋಲಾರ ಹೊರವಲಯದ ಕೊಂಡರಾಜನಹಳ್ಳಿಯಲ್ಲಿ ನಡೆದಿದೆ. ಸ್ಕೈವಾಕ್ ಪಿಲ್ಲರ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಸ್ಕೈವಾಕ್ ಮುರಿದು ಬಿದ್ದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಿಲ್ಲ. ಸ್ಥಳಕ್ಕೆ ಆಗಮಿಸಿದ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
ಸತತ ನಾಲ್ಕೈದು ಗಂಟೆಗಳ ಕಾರ್ಯಾಚರಣೆ ಬಳಿಕ ಮುರಿದು ಬಿದ್ದಿದ್ದ ಸ್ಕೈವಾಕ್ ತೆರವುಗೊಳಿಸಲಾಗಿದೆ. ಘಟನೆಯಿಂದ ಚೆನೈ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿ ವಾಹನ ಸವಾರರು ಪರದಾಡುವಂತಾಯಿತು. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
