ಉದಯವಾಹಿನಿ, ಬೆಂಗಳೂರು: ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿ ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ ಜೊತೆಗೆ ಸಂತ್ರಸ್ತರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಈ ಕುರಿತು ಎಕ್ಸ್‌ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು, ನೆರೆಪೀಡಿತ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಲ್ಲಾ ತುರ್ತು ಸೌಲಭ್ಯಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇ ಎಂದು ಒತ್ತಾಯಿಸಿದ್ದಾರೆ.
ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿ ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಕ್ಷೇಮಕ್ಕಾಗಿ ನಾನು ಹೃದಯಪೂರ್ವಕವಾಗಿ ಪ್ರಾರ್ಥಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ, ಅವರಿಗೆ ಅಗತ್ಯ ಸೌಕರ್ಯ ಕಲ್ಪಿಸುವುದು ಕರ್ನಾಟಕ ಕಾಂಗ್ರೆಸ್ ಸರಕಾರದ ಆದ್ಯ ಕರ್ತವ್ಯ. ನೆರೆಪೀಡಿತ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಲ್ಲಾ ತುರ್ತು ಸೌಲಭ್ಯಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸುತ್ತೇನೆ.
