ಉದಯವಾಹಿನಿ,ಬೆಂಗಳೂರು : ಪಡಿತರದಾರರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ಅಕ್ಕಿ ಜೊತೆ ರಾಗಿ, ಜೋಳ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಕನಿಷ್ಠ ಬೆಂಬಲ ಬೆಲೆ ಯಡಿ ಅಕ್ಕಿ ಜೊತೆ ರಾಗಿ ಅಥವಾ ಜೋಳವನ್ನೂ ಸೇರಿಸಿ ಕೊಡಲು ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ. 5 ಕೆಜಿ ಅಕ್ಕಿ ನೀಡಲು ಕೇಂದ್ರ ನಿರಾಕರಣೆ ಮಾಡಿದೆ ಹೀಗಾಗಿ ಮುಂದಿನ ದಿನಗಳಲ್ಲಿ ಜೋಳ ಹಾಗೂ ರಾಗಿ ಕೊಡಲು ಚರ್ಚೆ ನಡೆಸಲಾಗಿದೆ. 8 ಕೆಜಿ ಅಕ್ಕಿ ಜೊತೆ 2ಕೆಜಿ ಜೋಳ/ರಾಗಿ ನೀಡಲು ಚಿಂತನೆ ನಡೆಸಲಾಗಿದೆ ಎಂದರು. ಉತ್ತರಕರ್ನಾಟಕ ಭಾಗದಲ್ಲಿ ಜೋಳ, ದಕ್ಷಿಣ ಕರ್ನಾಟಕ ಭಾಗದಲ್ಲಿ ರಾಗಿ ನೀಡುವ ಬಗ್ಗೆ ಚರ್ಚಿಸಲಾಗಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು. ಇಂದಿನಿಂದ ಅನ್ನಭಾಗ್ಯ ಗ್ಯಾರಂಟಿ ಯೋಜನೆ ಅಧಿಕೃತವಾಗಿ ಜಾರಿ ಆಗಲಿದೆ. ಐದು ಕೆಜಿ ಅಕ್ಕಿ ಜೊತೆಗೆ ಉಳಿದ ಐದು ಕೆಜಿ ಅಕ್ಕಿ ಬದಲು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಶನಿವಾರದಿಂದಲೇ ಹಂತ ಹಂತವಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಅಕ್ಕಿ ದಾಸ್ತಾನು ಸಂಗ್ರಹವಾಗುವವರೆಗೆ ಹಣ ನೀಡಲಾಗುತ್ತದೆ.
