ಉದಯವಾಹಿನಿ, ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ (Karur)  ಆಯೋಜಿಸಿದ್ದ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರ ಪ್ರಚಾರ ರಾಲಿಯ ವೇಳೆ ನಡೆದ ಕಾಲ್ತುಳಿತದಿಂದ ಸುಮಾರು 39 ಜನರು ಸಾವನ್ನಪ್ಪಿದ್ದರು. ಈ ಬಗ್ಗೆ ನಟರಾದ ಕಮಲ್ ಹಾಸನ್ ರಜನಿಕಾಂತ್ ದುಃಖ ವ್ಯಕ್ತಪಡಿಸಿದ್ದು, ಈ ಘಟನೆ ಹೃದಯವನ್ನು ನಡುಗಿಸುತ್ತದೆ. ಜೀವ ಕಳೆದುಕೊಂಡವರ ಕುಟುಂಬಗಳಿಗೆ ಆಳವಾದ ಸಂತಾಪಗಳು ಎಂದು ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹೇಳಿದ್ದಾರೆ.
ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಪ್ರಚಾರ ರಾಲಿಯಲ್ಲಿ ಕಾಲ್ತುಳಿತ ಉಂಟಾದ ಬಳಿಕ ಅವರು ತಮ್ಮ ಭಾಷಣವನ್ನು ನಿಲ್ಲಿಸಬೇಕಾಯಿತು. ರಾಲಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮಕ್ಕಳು ಸೇರಿದಂತೆ ಹಲವಾರು ಮಂದಿ ಹಾಜರಿದ್ದವರು ಹೆಚ್ಚಿನ ಜನದಟ್ಟಣೆಯಿಂದ ಕೆಲವರು ಮೂರ್ಛೆ ಹೋದರು.

ಈ ಕುರಿತು ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಜನಿಕಾಂತ್, ಕರೂರಿನಲ್ಲಿ ಸಂಭವಿಸಿದ ಘಟನೆಯಲ್ಲಿ ಅಮಾಯಕರ ಜೀವಹಾನಿಯ ಸುದ್ದಿ ಹೃದಯವನ್ನು ನಡುಗಿಸುತ್ತದೆ ಮತ್ತು ಅಪಾರ ದುಃಖವನ್ನು ಉಂಟುಮಾಡುತ್ತದೆ. ಜೀವ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಗಾಯಗೊಂಡವರಿಗೆ ಸಾಂತ್ವನ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!