ಉದಯವಾಹಿನಿ, ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ 2025ರ ಏಷ್ಯಾ ಕಪ್ ಟೂರ್ನಿಯ ಫೈನಲ್‌ ಪಂದ್ಯ ಭಾನುವಾರ ದುಬೈ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಸೂರ್ಯಕುಮಾರ್‌ ಯಾದವ್‌ ನಾಯಕತ್ವದ ಭಾರತ ತಂಡಕ್ಕೆ ಇಂಗ್ಲೆಂಡ್‌ ಮಾಜಿ ಸ್ಪಿನ್ನರ್‌ ಮಾಂಟಿ ಪನೇಸರ್‌ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನ ತಂಡ ಈಗಾಗಲೇ ಎರಡು ಬಾರಿ ಭಾರತದ ಎದುರು ಸೋಲು ಅನುಭವಿಸಿದೆ. ಹಾಗಾಗಿ ಈ ತಂಡ ಫೈನಲ್‌ನಲ್ಲಿ ಭಾರತಕ್ಕೆ ಕಠಿಣ ಪೈಪೋಟಿ ನೀಡಬಹುದು. ಹಾಗಾಗಿ ಟೀಮ್‌ ಇಂಡಿಯಾ ಫೈನಲ್‌ನಲ್ಲಿ ಎಚ್ಚರಿಕೆಯಿಂದ ಆಡಬೇಕಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

ಪಾಕಿಸ್ತಾನ ತಂಡ ಫೈನಲ್‌ನಲ್ಲಿ ಸೋಲುವುದು ಕಡಿಮೆ. 2017ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ನಲ್ಲಿ ಭಾರತ ತಂಡವನ್ನು ಪಾಕಿಸ್ತಾನ ತಂಡ ಮಣಿಸಿತ್ತು. ಇದರ ಆಧಾರದಲ್ಲಿ ಮಾಂಟಿ ಪನೇಸರ್‌ ಭಾರತ ತಂಡಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ. “ಪಾಕಿಸ್ತಾನ ಅಪಾಯಕಾರಿ ತಂಡ, ಫೈನಲ್‌ನಲ್ಲಿ ಅವರು ಸೋಲುವುದಿಲ್ಲ. ಪಾಕಿಸ್ತಾನ ತಂಡ ಫೈನಲ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ತೋರಬಹುದು. ಆದರೆ, ಭಾರತ ಈ ಟೂರ್ನಿಯಲ್ಲಿ ಅತ್ಯುತ್ತಮ ತಂಡವಾಗಿದೆ. ಆದರೆ, ಫೈನಲ್‌ನಲ್ಲಿ ಪಾಕಿಸ್ತಾನ ತಂಡವನ್ನು ಹಗುರವಾಗಿ ಪರಿಗಣಿಸಬಾರದು,” ಎಂದು ಇಂಗ್ಲೆಂಡ್‌ ಮಾಜಿ ಸ್ಪಿನ್ನರ್‌ ಸಲಹೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!