ಉದಯವಾಹಿನಿ,ಹಾವೇರಿ: ಜಿಲ್ಲೆಯಲ್ಲಿ ಕಾರ್ಮಿಕರ ಕಾರ್ಡ್ ವಿತರಿಸಲು ಲಂಚಕ್ಕೆ ಬೇಡಿಕೆ ಇಟ್ಟು, ಕಾರ್ಮಿಕನಿಂದ ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿ ರಾಣೆಬೆನ್ನೂರು ತಾಲೂಕು ಕಾರ್ಮಿಕ ನಿರೀಕ್ಷಕಿ ಲೋಕಾಯುಕ್ತ ಬೆಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕು ಕಾರ್ಮಿಕ ನಿರೀಕ್ಷಕಿ ಮಮತಾಜ್ ಬೇಗಂ ಅವರು ಕಾರ್ಮಿಕ ನಾರಾಯಣಪ್ಪ ಎಂಬುವರಿಗೆ ಕಾರ್ಮಿಕರ ಕಾರ್ಡ್ ಕೊಡೋದಕ್ಕೆ 5,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಾರ್ಮಿಕ ನಾರಾಯಣಪ್ಪ ಅವರು ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಇಂದು ಲಂಚದ ಹಣವನ್ನು ಸ್ವೀಕರಿಸುವಾಗ ರಾಣೆಬೆನ್ನೂರು ತಾಲೂಕು ಕಾರ್ಮಿಕ ನಿರೀಕ್ಷಕಿ ಮಮ್ತಾಜ್ ಬೇಗಂ ಅನ್ನು ರೆಡ್ ಹ್ಯಾಂಡ್ ಆಗಿಯೇ ಲೋಕಾಯುಕ್ತ ದಾಳಿಯ ವೇಳೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಇದೀಗ ಲೋಕಾಯುಕ್ತ ಅಧಿಕಾರಿಗಳು ಕಾರ್ಮಿಕ ನಿರೀಕ್ಷಕಿ ಮಮ್ತಾಜ್ ಬೇಗಂ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
