ಉದಯವಾಹಿನಿ , ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಪಲ್ಟಿಯಾದ ಘಟನೆ ನೆಲಮಂಗಲ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ನೆಲಮಂಗಲ ಟೋಲ್ ಬಳಿ ತುಮಕೂರು ಕಡೆಯಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್ ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಪರಿಣಾಮ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. 1 ಕಿ.ಮೀ ವರೆಗೆ ವಾಹನಗಳು ಸಾಲಾಗಿ ನಿಂತಿವೆ. ಲಾರಿಯನ್ನ ತೆರವು ಮಾಡಲು ಟೋಲ್ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸರು ಹರಸಾಹಸಪಡುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!