ಉದಯವಾಹಿನಿ, ತುಮಕೂರು: ತುಮಕೂರು ದಸರಾ ಹಿನ್ನೆಲೆಯಲ್ಲಿ ತುಮಕೂರು ನಗರಕ್ಕೆ ಪ್ರವೇಶ ಮಾಡುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಸೆ.30, ಅ.1 ಹಾಗೂ ಅ.2ರಂದು ಸಂಜೆ 4 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ವಾಹನಗಳ ಮಾರ್ಗ ಬದಲಾವಣೆ ಮಾಡಿ ಪ್ರಕಟಣೆ ಹೊರಡಿಸಿದೆ. ನಗರ ಪ್ರವೇಶ ಮಾಡದೇ ರಿಂಗ್ ರಸ್ತೆ ಮೂಲಕ ವಾಹನ ಚಲಾಯಿಸುವುದು ಹಾಗೂ ಅಂತರಸನಹಳ್ಳಿ, ಶಿರಾ ಗೇಟ್ ಮೂಲಕ ಬಸ್ ನಿಲ್ದಾಣಕ್ಕೆ ಹೋಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅದರ ಜೊತೆಗೆ ಸಂಜೆ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಜೂನಿಯರ್ ಕಾಲೇಜು ಮೈದಾನಕ್ಕೆ ತರದೇ ನಿಗದಿ ಪಡಿಸಿದ ಸ್ಥಳದಲ್ಲೇ ಬಿಟ್ಟು ಬರುವಂತೆ ಸೂಚಿಸಲಾಗಿದೆ. ಇಂದು ರಾತ್ರಿ ಮೋಹಕತಾರೆ ರಮ್ಯಾ ಹಾಗೂ ಕ್ರೇಜಿ ಸ್ಟಾರ್ ರವಿಚಂದ್ರನ್ ಕಾರ್ಯಕ್ರಮ ನೀಡಲಿದ್ದಾರೆ. ಅದೇ ರೀತಿ ನಾಳೆ ಗಾಯಕಿ ಅನನ್ಯ ಭಟ್ ಮತ್ತು ಅರ್ಜುನ್ ಜನ್ಯರಿಂದ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ.

Leave a Reply

Your email address will not be published. Required fields are marked *

error: Content is protected !!