ಉದಯವಾಹಿನಿ, ಕಲಬುರಗಿ: ಪ್ರವಾಹ ಪೀಡಿತ ಕಲ್ಯಾಣ ಕರ್ನಾಟಕ ಭಾಗಗಳಾದ ಕಲಬುರಗಿ, ವಿಜಯಪುರ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದು ವೈಮಾನಿಕ ಸಮೀಕ್ಷೆ ನಡೆಸಿದರು.
ಸಿಎಂ ಸಿದ್ದರಾಮಯ್ಯ ಅವರು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬಳಿಕ ವಿಮಾನ ನಿಲ್ದಾಣದಲ್ಲೇ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು. ನಂತರ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆಗೆ ತೆರಳಿದರು. ಈ ವೇಳೆ ನಾಲ್ಕು ಜಿಲ್ಲೆಗಳ ಹನ್ನೊಂದು ಪಾಯಿಂಟ್‌ನಲ್ಲಿ ಸಮೀಕ್ಷೆ ನಡೆಸಿದರು. ಸಿಎಂ ಜೊತೆ ವೈಮಾನಿಕ ಸಮೀಕ್ಷೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಹಾಗೂ ಎಂ.ಬಿ ಪಾಟೀಲ್, ಶರಣಪ್ರಕಾಶ್ ಪಾಟೀಲ್ ಭಾಗಿಯಾಗಿದ್ದರು
