ಉದಯವಾಹಿನಿ, ವಿಶ್ವ ಕ್ರಿಕೆಟ್‌ನಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಇತ್ತೀಚೆಗೆ ರಾಜಕೀಯದಲ್ಲಿ ವಿಶ್ವದ ಗಮನ ಸೆಳೆದಿದ್ದ ನೇಪಾಳ ತಂಡವು ಎರಡು ಬಾರಿಯ ಟಿ20 ಚಾಂಪಿಯನ್ ವೆಸ್ಟ್ ಇಂಡೀಸ್ ವಿರುದ್ಧ ದ್ವಿಪಕ್ಷೀಯ ಸರಣಿ ಗೆದ್ದಿದೆ. 2 ಬಾರಿ ವಿಶ್ವಚಾಂಪಿಯನ್ ತಂಡದ ವಿರುದ್ಧ ಸರಣಿ ಗೆಲ್ಲುವ ಮೂಲಕ ಐಸಿಸಿ ಪೂರ್ಣ ಸದಸ್ಯ ತಂಡವೊಂದರ ವಿರುದ್ಧ ಮೊದಲ ಬಾರಿಗೆ ನೇಪಾಳ ಈ ಸಾಧನೆ ಮಾಡಿದೆ. ಸೆಪ್ಟೆಂಬರ್ 29ರಂದು ಶಾರ್ಜಾದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ನೇಪಾಳ ತಂಡವು ವೆಸ್ಟ್ ಇಂಡೀಸ್ ತಂಡವನ್ನು ಬರೋಬ್ಬರಿ 90 ರನ್‌ಗಳಿಂದ ಸೋಲಿಸಿತು. ಹೀಗಾಗಿ, ಒಂದು ಪಂದ್ಯ ಬಾಕಿ ಇರುವಾಗಲೇ ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿತು.
ಸ್ಪರ್ಧಾತ್ಮಕ ಮೊತ್ತ ದಾಖಲೆ: ಇದಕ್ಕೂ ಮೊದಲು, ನೇಪಾಳ ತಂಡವು ಮೊದಲ ಟಿ20 ಪಂದ್ಯದಲ್ಲಿಯೂ ವೆಸ್ಟ್ ಇಂಡೀಸ್ ತಂಡಕ್ಕೆ ಆಘಾತ ನೀಡಿತು. ಆ ಪಂದ್ಯದಲ್ಲಿ, ವೆಸ್ಟ್ ಇಂಡೀಸ್ ತಂಡವನ್ನು 19 ರನ್‌ಗಳಿಂದ ಸೋಲಿಸಿತು. ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನೇಪಾಳ ತಂಡವು ಆರಂಭಿಕ ಆಟಗಾರರಾದ ಆಸಿಫ್ ಶೇಖ್ (ಔಟಾಗದೆ 68) ಮತ್ತು ಸಂದೀಪ್ ಜೋರಾ (63) ಅವರ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 173 ರನ್‌ಗಳನ್ನು ಗಳಿಸಿತು. ವಿಂಡೀಸ್ ಬೌಲರ್‌ಗಳಲ್ಲಿ, ಅಕೀಲ್ ಹೊಸೇನ್ ಮತ್ತು ಕೈಲ್ ಮೇಯರ್ಸ್ ತಲಾ 2 ವಿಕೆಟ್ ಪಡೆದರೆ, ಜೆಡಿಯಾ ಬ್ಲೇಡ್ಸ್ ಒಂದು ವಿಕೆಟ್ ಪಡೆದರು.

Leave a Reply

Your email address will not be published. Required fields are marked *

error: Content is protected !!