ಉದಯವಾಹಿನಿ, ಮೈಸೂರು: ನಾಡಹಬ್ಬ ದಸರಾ ಅದ್ದೂರಿಯಾಗಿ ನಡೆಯುತ್ತಿದೆ. ಇದರ ಭಾಗವಾಗಿ ಯದುವೀರ್ ಒಡೆಯರ್‌ ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇವಸ್ಥಾನದ ಬಳಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ್ದಾರೆ. ವಜ್ರಮುಷ್ಠಿ ಕಾಳಗ ಮುಕ್ತಾಯವಾಗುತ್ತಿದ್ದಂತೆ ಭುವನೇಶ್ವರಿ ದೇವಾಲಯದವರೆಗೆ ವಿಜಯಯಾತ್ರೆ ನಡೆಯಿತು. ಬಳಿಕ ಯದುವೀರ್ ಒಡೆಯರ್‌, ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದರು. ಪೂಜೆ ಮುಕ್ತಾಯವಾಗುತ್ತಿದ್ದಂತೆ ಯದುವೀರ್ ಅರಮನೆಗೆ ವಾಪಸ್ ಆದರು. ಇದರೊಂದಿಗೆ ಅರಮನೆ ದಸರಾ ಮುಕ್ತಾಯಗೊಂಡಿದೆ.
ಪೊಲೀಸ್‌ ಬ್ಯಾಂಡ್‌ ಜೊತೆಗೆ ಪಟ್ಟದ ಆನೆ, ಕುದುರೆ, ಹಸು ವಿಜಯಯಾತ್ರೆಯಲ್ಲಿ ಭಾಗಿಯಾಗಿದ್ದವು. ಖಾಸಾ ಆಯುಧಗಳನ್ನು ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆ ಮಾಡಲಾಯಿತು. ಶ್ರೀಕಂಠದತ್ತ ಒಡೆಯರ್ ಬಳಸುತ್ತಿದ್ದ ಕಾರಿನಲ್ಲಿ ಯದುವೀರ್ ವಿಜಯಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!