ಉದಯವಾಹಿನಿ, ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಕೆ.ಸಿ ಎನ್ ಮೋಹನ್ ಇಂದು ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಕೆ ಸಿ ಮೋಹನ್ ಇಂದು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ನವರಂಗ್ ಥಿಯೇಟರ್ ಮಾಲೀಕರೂ ಆಗಿದ್ದ ಕೆಸಿ ಮೋಹನ್ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಜೂಲಿ, ಭಲೇ ಚತುರ, ಜಯಸಿಂಹ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿದ್ದರು. ಮೋಹನ್ ನಿಧನಕ್ಕೆ ಸ್ಯಾಂಡಲ್ ವುಡ್ ಶೋಕಿಸುತ್ತಿದೆ.
