ಉದಯವಾಹಿನಿ, ನವದೆಹಲಿ: ಪೇಸ್‌ಮೇಕರ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ (PM Modi) ಆರೋಗ್ಯ ವಿಚಾರಿಸಿದ್ದಾರೆ.
ಈ ಕುರಿತು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಂದು ಖರ್ಗೆ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯ ವಿಚಾರಿಸಿ, ಆದಷ್ಟು ಬೇಗ ಗುಣಮುಖರಾಗುವಂತೆ ಹಾರೈಸಿದ್ದೇನೆ. ಅವರ ಆರೋಗ್ಯ ಹಾಗೂ ದೀರ್ಘಾಯುಷ್ಯಕ್ಕಾಗಿ ದೇವರಲ್ಲಿ ಪಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಉಸಿರಾಟದ ಸಮಸ್ಯೆಯಿಂದಾಗಿ ಬುಧವಾರ (ಅ.1) ಮಲ್ಲಿಕಾರ್ಜುನ ಖರ್ಗೆಯವರನ್ನು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿ, ಮಲ್ಲಿಕಾರ್ಜುನ ಖರ್ಗೆ ಅವರು ಪೇಸ್‌ಮೇಕರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಯಶಸ್ವಿಯಾಗಿ ಪೂರ್ಣಗೊಂಡಿದೆ. ಸದ್ಯ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದರು.
