ಉದಯವಾಹಿನಿ, ಬೆಂಗಳೂರು: ಭಾರತದ ಎರಡನೇ ಪ್ರಧಾನ ಮಂತ್ರಿ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಜನ್ಮ ದಿನವನ್ನು ಪ್ರತಿವರ್ಷ ಅಕ್ಟೋಬರ್ 2ರಂದು ದೇಶಾದ್ಯಂತ ಆಚರಿಸಲಾಗುತ್ತದೆ. ಶಾಸ್ತ್ರಿಯವರು ಉತ್ತರ ಪ್ರದೇಶದ ವಾರಾಣಸಿ ಜಿಲ್ಲೆಯ ಮೊಘಲ್‌ಸರಾಯ್‌ನಲ್ಲಿ 1904 ಅಕ್ಟೋಬರ್‌ 2ರಂದು ಜನಿಸಿದರು. ಗಾಂಧಿ ಜಯಂತಿ ದಿನದಂದೆ ಶಾಸ್ತ್ರಿಯವರ ಜನ್ಮ ದಿನಾಚರಣೆ ಆಚರಿಸಲಾಗುತ್ತದೆ. ಅವರ ತಂದೆ ಶಾರದಾ ಪ್ರಸಾದ್‌ ಮತ್ತು ತಾಯಿ ರಾಮದುಲಾರಿ ದೇವಿ. ಶಾಸ್ತ್ರಿಯವರು ಶಾಲೆಯನ್ನು ತೊರೆದು 1920ರಲ್ಲಿ ಗಾಂಧೀಜಿಯವರು ಪ್ರಾರಂಭಿಸಿದ ಅಹಿಂಸಾತ್ಮಕ ಸ್ವಾತಂತ್ಯ ಚಳವಳಿಯಲ್ಲಿ ಭಾಗವಹಿಸಿ. ನಮ್ಮ ದೇಶದ ಸ್ವಾತಂತ್ಯಕ್ಕಾಗಿ ಶ್ರಮಿಸಿದರು. ಅವರ ಜನ್ಮ ವಾರ್ಷಿಕೋತ್ಸವದಂದು ಶಾಸ್ತ್ರಿಯವರ ಜೀವನ, ರಾಜಕೀಯ ಜೀವನದ ಬಗ್ಗೆ ಇಲ್ಲಿದೆ ಮಾಹಿತಿ.

ರಾಜಕೀಯ ಜೀವನ ಆರಂಭ
ಪಂಡಿತ್ ಜವಾಹರಲಾಲ್ ನೆಹರು ಅವರ ಮರಣದ ನಂತರ, ದೇಶದ ಎರಡನೇ ಪ್ರಧಾನಿಯಾಗಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಜೂನ್ 09ರಂದು 1964 ರಂದು ಪ್ರಮಾಣವಚನ ಸ್ವೀಕರಿಸಿದರು. ಆದರೆ ದುರದೃಷ್ಟವಶಾತ್ ಅಧಿಕಾರ ಚುಕ್ಕಾಣಿ ಹಿಡಿದು ಕೇವಲ ಒಂದೂವರೆ ವರ್ಷಕ್ಕೆ ನಿಧಾನವಾದರು. 11 ಜನವರಿ 1966 ರಂದು ನಿಧನರಾದ ಶಾಸ್ತ್ರಿಯವರ ಅವರ ಸಾವಿಗೆ ಕಾರಣ ಇನ್ನೂ ನಿಗೂಢವಾಗಿಯೇ ಉಳಿದಿದೆ. ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲ್ಲಾದರೂ, ವಿಷ ಕುಡಿಸಿ ಹತ್ಯೆ ಮಾಡಲಾಗಿದೆ ಎಂಬ ಅನುಮಾನವನ್ನು ಹಲವಾರು ಜನ ವ್ಯಕ್ತ ಪಡಿಸುತ್ತಾರೆ.

ಪ್ರಾಮಾಣಿಕ ರಾಜಕಾರಣಿ: ಗಾಂಧಿ ತತ್ವಗಳನ್ನು ಅನುಸರಿಸುತ್ತಿದ್ದ ಶಾಸ್ತ್ರಿಯವರು ಸ್ವಾತಂತ್ರ್ಯ ಸೇನಾನಿಯಾಗಿದ್ದರು. ಈ ದೇಶ ಕಂಡ ಸರಳ ಹಾಗೂ ಸಜ್ಜನ ಅತ್ಯುತ್ತಮ ಪ್ರಧಾನಿ ಎಂಬ ಬಿರುದು ಅವರ ಪಾಲಿಗೆ ಇತ್ತು. ಪ್ರಾಮಾಣಿಕತೆಗೆ ಬದ್ಧರಾಗಿದ್ದ ಅವರು ತನ್ನ ಅಚಲ ನಿರ್ಧಾರ, ಅದಮ್ಯ ಸಮಯ ಪ್ರಜ್ಞೆ, ಆಗಾಧ ಅರಿವು ಇವುಗಳಿಂದ ಅಧಿಕಾರದುದ್ದಕ್ಕೂ ಎದುರಾದ ಎಲ್ಲ ರಾಷ್ಟ್ರೀಯ, ರಾಜಕೀಯ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿದರು. ದೇಶದ ಆರ್ಥಿಕ ಹಾಗೂ ಸಮಾಜಿಕ ಅಭಿವೃದ್ಧಿಗಾಗಿ ಶ್ರಮಿಸಿದರು.

ಘೋಷ ವಾಕ್ಯ: ‘ಭಾರತದ ಸಮಗ್ರತೆ ಹಾಗೂ ರಾಷ್ಟ್ರ ಧ್ವಜದ ಗೌರವ ಕಾಪಾಡಲು ನಮ್ಮ ಬದುಕಿನ ಕೊನೆ ಕ್ಷ ಣದ ವರೆಗೂ ಹೋರಾಡುತ್ತೇವೆ. ಈ ವಿಷಯದಲ್ಲಿ ನಾವೂ ಸಾವಿಗೂ ಅಂಜುವುದಿಲ್ಲ’ ಹಾಗೂ ‘ಜೈವಾನ್‌ ಜೈ ಕಿಸಾನ್‌’ ಎಂಬುದು ಅವರ ಪ್ರಮುಖ ಪ್ರಸಿದ್ಧ ಘೋಷವಾಕ್ಯವಾಗಿದೆ. ಅವರು ಕೊನೆವರೆಗೂ ಸರಳ ಖಾದಿಧಾರಿಯಾಗಿದ್ದು ಸ್ವತಃ ನೂಲುತ್ತಿದ್ದರು. ಉಜ್ಬೇಕಿಸ್ತಾನದ ತಾಷ್ಕೆಂಟ್‌ನಲ್ಲಿ ಜನವರಿ 11, 1966ರಲ್ಲಿ ಶಾಸ್ತ್ರೀಜಿ ಅಕಾಲಿಕವಾಗಿ ಸಾವನ್ನಪ್ಪಿದರು. ಚಿಕ್ಕ ದೇಹ ದೊಡ್ಡ ಆದರ್ಶ, ಮೆದು ದನಿ, ಉಗ್ರ ರಾಷ್ಟ್ರ ಭಕ್ತಿ, ದೇಶದ ಪ್ರಧಾನಿಯಾದರೂ ಸರಳತೆ ಬಿಡದ ವ್ಯಕಿತ್ವ, ಪ್ರಾಮಾಣಿಕತೆಯನ್ನೇ ಜೀವಾಳವಾಗಿಸಿಕೊಂಡು ಬದುಕಿದ ಶಾಸ್ತ್ರೀಜಿಯವರ ಆದರ್ಶ ಸರ್ವರಿಗೂ ಅನುಕರಣೀಯ.

 

Leave a Reply

Your email address will not be published. Required fields are marked *

error: Content is protected !!